ರವಿಕುಮಾರ್ಗೆ ಚಿನ್ನದ ಪದಕ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ.23
ಇಂಡಿಯನ್ ಮಾರ್ಷಲ್ ಆರ್ಟ್ಸ್, ಐಎಂಎಫ್ ಗ್ರೂಫ್ನ ಸಂಯುಕ್ತ ಆಶ್ರಯದಲ್ಲಿ ಮುಂಬೈನ ಬೇಲಾಪುರದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಚಿಕ್ಕಮಗಳೂರಿನ ಎಚ್.ಎಲ್. ರವಿಕುಮಾರ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
45 ರಿಂದ 50 ವರ್ಷ ವಯೋವುತಿಯ ಬ್ಲಾಕ್ ಬೆಲ್ಟ್ ವಿಭಾಗದ ಕತಾ ಮತ್ತು ಕುಮಿತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಬರುವ ಮೇ 29 ರಂದು ಮಲೇಶಿಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಸ್ಪರ್ಧೆಯಲ್ಲಿ ಕರ್ನಾಟಕ, ಆಂದ್ರಪ್ರದೇಶ, ತಮಿಳುನಾಡು, ಗುಜರಾತ್ ಸೇರಿದಂತೆ ದೇಶದ ವಿವಿಧ ರಾಜ್ಯಗಳಿಂದ ಸುಮಾರು 2 ಸಾವಿರ ಕ್ರೀಡಾಪಟುಗಳು ಭಾಗವಹಿಸಿದ್ದರು. ಎಚ್.ಎಲ್. ರವಿಕುಮಾರ್ ಅವರು ಚಿಕ್ಕಮಗಳೂರಿನ ಕೆಪಿಟಿಸಿಎಲ್ನಲ್ಲಿ ಜ್ಯೂನಿಯರ್ ಎಂಜಿನಿಯರ್ರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.