ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಇಂದು ಪಟ್ಟಣಕ್ಕೆ ಆರ್. ಅಶೋಕ

Rashmi Kasaragodu
Updated On : 27 Apr 2013, 10:45 am

ನರಸಿಂಹರಾಜಪುರ: ಉಪಮುಖ್ಯಮಂತ್ರಿ ಅಶೋಕ ಅವರು ಏ.27 ರ ಶನಿವಾರ ಪಟ್ಟಣಕ್ಕೆ ಆಗಮಿಸಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮುಖಂಡ ಜೆ.ಜಿ. ನಾಗರಾಜ್ ತಿಳಿಸಿದ್ದಾರೆ.   ಶನಿವಾರ ಬೆಳಗ್ಗೆ 11 ಗಂಟೆಗೆ ಪಟ್ಟಣದ ವಾಟರ್ ಟ್ಯಾಂಕ್ ಸಮೀಪದ ನೂತನ ರಂಗಮಂದಿರದಲ್ಲಿ ಬಿಜೆಪಿ ಪ್ರಚಾರ ಸಭೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್, ಜಿಲ್ಲಾ ಮತ್ತು ಕ್ಷೇತ್ರ ಮಟ್ಟದ ಬಿಜೆಪಿ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇಂದು ಕಾಂಗ್ರೆಸ್ ಪ್ರಚಾರ ಸಭೆ
ನರಸಿಂಹರಾಜಪುರ:  ಏ.27ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಬಹಿರಂಗ ಪ್ರಚಾರ ಸಭೆ ಹಳೇ ಕೆನರಾ ಬ್ಯಾಂಕ್ ಸಮೀಪದ ವೇದಿಕೆಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬೂಬಕರ್ ತಿಳಿಸಿದ್ದಾರೆ.  ಕೊಪ್ಪದ ವಕೀಲ ಸುಧೀರ್ ಕುಮಾರ್ ಮರೊಳ್ಳಿ, ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ, ಜಿಲ್ಲಾ ಮತ್ತು  ಕ್ಷೇತ್ರ ಮಟ್ಟದ ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು  ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement