ಇಂದು ಪಿಇಎಸ್ಐಟಿಎಂ ವಾರ್ಷಿಕೋತ್ಸವ
ಶಿವಮೊಗ್ಗ: ಪಿಇಎಸ್ಐಟಿಎಂ ಕಾಲೇಜಿನ ವಾರ್ಷಿಕೋತ್ಸವ ಏಪ್ರಿಲ್ 27ರಂದು ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ.
ಮನೋವೈದ್ಯ ಅಶೋಕ್ ಪೈ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿಇಎಸ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಸಂಸದ ಬಿ.ವೈ.ರಾಘವೇಂದ್ರ ವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಸುರೇಶ್ಚಂದ್ರ ಮೋಹನ್ ಉಪಸ್ಥಿತರಿರುವರು.