ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅಪಪ್ರಚಾರಕ್ಕೆ ಕಿವಿಗೊಡದಿರಿ

Lingaraj Badiger
Updated On : 29 Apr 2013, 10:47 am

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಜನ ತುಂಬಾ ಬುದ್ಧಿವಂತರು, ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡುವುದಿಲ್ಲ. ಕಾಂಗ್ರೆಸ್ ಅಪಪ್ರಚಾರದ ದಾರಿಯಲ್ಲಿ ಸಾಗುತ್ತಿದ್ದು, ಇದನ್ನು ಕೇಳುವವರು ಯಾರೂ ಇಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಎಂದು ಸಚಿವ ಡಿ.ಎನ್. ಜೀವರಾಜ್ ಹೇಳಿದರು.
 ಇತ್ತೀಚೆಗೆ ಶೃಂಗೇರಿಯಲ್ಲಿ ನಡೆದ ವಿಪ್ರ ಸಮ್ಮೇಳನದಲ್ಲಿ ನಾನು ಬ್ರಾಹ್ಮಣ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದೇನೆಂದು ಕಾಂಗ್ರೆಸ್‌ನವರು ಕ್ಷೇತ್ರದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದಿರುವ ಜೀವರಾಜ್, ವಿಪ್ರ ಸಮಾಜವನ್ನು ಗೌರವದಿಂದ ನೋಡಿದ್ದೇನೆ. ಅವರನ್ನು ಅವಹೇಳನಕಾರಿಯಾಗಿ ನೋಡುವ ಉದ್ದೇಶವೂ ನನಗಿಲ್ಲ ಎಂದು  ಹೇಳಿದ್ದಾರೆ.
ಕಳೆದ 5 ವರ್ಷದಲ್ಲಿ ಶೃಂಗೇರಿ ಕ್ಷೇತ್ರಕ್ಕೆ ಅಪಾರ ಹಣ ತಂದಿದ್ದೇನೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿಸಿದ್ದೇನೆ. ಈ ಬಾರಿಯ ಚುನಾವಣೆಯನ್ನು ಅಭಿವೃದ್ಧಿ ಕೆಲಸಗಳ ಆಧಾರದ ಮೇಲೆ ಎದುರಿಸಲಾಗುವುದು. ಆದರೆ ಕಾಂಗ್ರೆಸ್ ಇಲ್ಲಿ ಹೇಳಿಕೊಳ್ಳಲು ಯಾವುದೇ ಜನಪರ ಕೆಲಸ ಮಾಡಿಲ್ಲ. ಅದ್ದರಿಂದ ತಮ್ಮ ವಿರುದ್ಧ ಆರೋಪ ಮಾಡುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement