ಕಾಂಗ್ರೆಸ್, ಬಿಜೆಪಿ ಶಕ್ತಿ ಕಳೆದುಕೊಂಡಿವೆ
ಕೊಪ್ಪ: ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ತಮ್ಮ ಸ್ವಶಕ್ತಿ ಕಳೆದು ಕೊಂಡು ಪ್ರಚಾರ ಸಭೆಗಳಲ್ಲಿ ಜೆಡಿಎಸ್ ನಮ್ಮೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಮತದಾರರನ್ನು ದಾರಿ ತಪ್ಪಿಸುವಂತಹ ಕೆಲಸದಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಟಿ. ಕಂಠಿ ದೂರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚಿಂತನೆ ಇರುವ ಅಭ್ಯರ್ಥಿ ತಲಕಾನೆ ರಾಜೇಂದ್ರರನ್ನು ಕಣಕ್ಕೆ ಇಳಿಸಿದೆ ಎಂದರು.