ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕಸ ವಿಲೇವಾರಿ: ಪ್ರತಿಭಟನೆ ಎಚ್ಚರಿಕೆ

Rashmi Kasaragodu
Updated On : 2 Aug 2013, 11:25 am

ಚಿಕ್ಕಮಗಳೂರು: ನಗರದ ಕಸ ವಿಲೇವಾರಿಗೆ ತಕ್ಷಣಕ್ಕೆ ಮುಂದಾಗದೆ ಹೋದರೆ ಜಿಲ್ಲಾ ಉಸ್ತುವಾರಿ ಸಚಿವರು ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಪ್ಪುಪಟ್ಟಿ ಪ್ರದರ್ಶನ ಮಾಡಲಾಗುವುದು ಎಂದು ನಗರ ಬಿಜೆಪಿ ವಕ್ತಾರ ಪುಷ್ಪರಾಜ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಕಳೆದ ಒಂದು ವಾರದಿಂದ ಕಸ ಸಾಗಾಣಿಕೆಯಾಗದೆ ಎಲ್ಲಾ ರಸ್ತೆಗಳಲ್ಲಿ ದುರ್ವಾಸನೆ ಉಂಟಾಗಿದ್ದು ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವಾರದ ಹಿಂದೆ ನಿಯೋಜಿತ ಬಿಜೆಪಿ ನಗರಸಭಾ ಸದಸ್ಯರುಗಳು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದಾಗ 2 ಅಥವಾ 3 ದಿನಗಳಲ್ಲಿ ಸಮಸ್ಯೆಯನ್ನು ಪರಿಹರಿಸುವುದಾಗಿ ನಿಯೋಗಕ್ಕೆ ಭರವಸೆ ನೀಡಿದ್ದರು  ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆದರೆ, ಒಂದು ವಾರವಾದರೂ ಈ ಗಂಭೀರ ಸಮಸ್ಯೆಯ ಬಗ್ಗೆ ಚಕಾರವೆತ್ತದೆ ಮೌನವಾಗಿರುತ್ತಾರೆ. ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗೂ ಈ ಕಸದ ಸಮಸ್ಯೆಯಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಇದೆ. ರಸ್ತೆಯಲ್ಲಿ ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಮೂಗು ಮುಚ್ಚಿ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಇದರ ಬಗ್ಗೆ ಗಮನ ಹರಿಸದೆ ಇರುವುದು ಅನುಮಾನಕ್ಕೆ ಆಸ್ಪದವಾಗಿದೆ. ಇನ್ನೆರಡು ದಿನಗಳಲ್ಲಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯದಿದ್ದಲ್ಲಿ ನಗರದ ಸಾರ್ವಜನಿಕರು ಹಾಗೂ ಸಂಘ, ಸಂಸ್ಥೆಗಳ ಜೊತೆಗೂಡಿ ಚರ್ಚಿಸಿ ಉಗ್ರ ಪ್ರತಿಭಟನೆ ನಡೆಸಲಾಗುವುದು. ನಗರಕ್ಕೆ ಭೇಟಿ ನೀಡಲಿರುವ ಜಿಲ್ಲಾ ಉಸ್ತುವಾರಿ ಸಚಿವರಾದ ಅಭಯ್ ಚಂದ್ರ ಜೈನ್ ರವರಿಗೆ ಕಪ್ಪ್ಪು ಪಟ್ಟಿ ಪ್ರದರ್ಶನ ಮಾಡಲಾಗುವುದು ಎಂದು ಹೇಳಿದ್ದಾರೆ.
ತಕ್ಷಣ ಇಂದಾವರ ಗ್ರಾಮಸ್ಥರೊಂದಿಗೆ ಚರ್ಚಿಸಿ ವಿಶ್ವಾಸಕ್ಕೆ ತೆಗೆದುಕೊಂಡು ಕಸ ಸಾಗಾಣೆ ಮಾಡಿ, ವೈಜ್ಞಾನಿಕ ರೀತಿಯಲ್ಲಿ ಔಷಧಿಯನ್ನು ಸಿಂಪಡಿಸಿ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗ ಹರಡದಂತೆ ಗ್ರಾಮದ ಗ್ರಾಮಸ್ಥರಿಗೆ ತೊಂದರೆಯಾಗದ ರೀತಿಯಲ್ಲಿ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement