ತೊಗರಿಹಂಕಲ್ ಶಾಲೆಯಲ್ಲಿ ಹಾಲು ವಿತರಣೆ
ತೊಗರಿಹಂಕಲ್: ಇಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಉಚಿತ ಹಾಲು ವಿತರಿಸುವ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪವಿತ್ರಾ ಅವರು ಹಾಲು ವಿತರಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿದರು. ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸಂಜೀವ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯೋಪಾಧ್ಯಾಯ ಕೆ.ಪಿ. ದೇವರಾಜ್ ಸ್ವಾಗತಿಸಿದರು. ದೈಹಿಕ ಶಿಕ್ಷಕ ದಕ್ಷಿಣಾಮೂರ್ತಿ ವಂದಿಸಿದರು. ಈ ಸಂದರ್ಭದಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಸದಸ್ಯರು ಹಾಗೂ ಪೋಷಕರು, ಶಿಕ್ಷಕರು ಹಾಲು ವಿತರಣಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.