ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಕ್ಷೀರಭಾಗ್ಯ ಒಂದು ವಿಶಿಷ್ಟ ಯೋಜನೆ

Rashmi Kasaragodu
Updated On : 3 Aug 2013, 11:37 am

ಶೃಂಗೇರಿ: ಸರ್ಕಾರ 1 ರಿಂದ ಹತ್ತನೇ ತರಗತಿಯವರೆಗಿನ ಮಕ್ಕಳಿಗೆ ಮೂರು ದಿನಗಳ ಕಾಲ ಹಾಲು, ಪೌಷ್ಟಿಕಾಂಶ  ಮಾತ್ರೆ ವಿತರಿಸುವ ಕ್ಷೀರಭಾಗ್ಯ ಯೋಜನೆ ಒಂದು ವಿಶಿಷ್ಟ ಯೋಜನೆಯಾಗಿದೆ ಎಂದು ಗೋಕುಲ್ ದಾಸ್ ನಾಯಕ್ ತಿಳಿಸಿದರು.
ಅವರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಕ್ಷೀರಭಾಗ್ಯ ಯೋಜನೆ ಉದ್ಘಾಟಿಸಿ ಮಾತನಾಡಿದರು.
ಈಗಾಗಲೇ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದ್ದು, ಈಗ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ಪೌಷ್ಟಿಕಾಂಶ ಕೊರತೆಯಿಂದ ಬಳಲುತ್ತಿರುವ ಅದೆಷ್ಟೋ ಮಕ್ಕಳಿಗೆ ಇದರ ಪ್ರಯೋಜನವಾಗಲಿದೆ ಎಂದರು.
ಪ್ರಾಸ್ತಾವಿಕ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಸನ್ನ ಕುಮಾರ್, ವಿದ್ಯಾರ್ಥಿಗಳು ಇಂತಹ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಅಕ್ಷರ ದಾಸೋಹ ಸಮಿತಿಯ ಕೃಷ್ಣಪ್ಪ, ತಾಲೂಕು ಶಿಶು ಅಭಿವೃದ್ಧಿ  ಯೋಜನಾಧಿಕಾರಿ ಟಿ.ಎಲ್. ಉಮೇಶ್ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅನಂತ ಕೃಷ್ಣಭಟ್ ಅಧ್ಯಕ್ಷತೆ ವಹಿಸಿದ್ದರು. ರಂಗಪ್ಪ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement