'ಜನರಿಗೆ ಇನ್ನೂ ಮೂಲಭೂತ ಸೌಲಭ್ಯ ಕಲ್ಪಿಸಿಲ್ಲ'
ಕಡೂರು: ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಜನರಿಗೆ ಕನಿಷ್ಠ ಮೂಲಭೂತ ಸವಲತ್ತು ನೀಡಲು ಆಗದಿರುವುದು ವಿಷಾದಕರ ಎಂದು ಕಸಾಪ ರಾಜ್ಯಾಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದರು.
ಅವರು ಕಡೂರು ಪಟ್ಟಣದ ಕೋಟೆಯ ಶಂಕರಮಠದಲ್ಲಿ ತಾಲೂಕು ಕಸಾಪ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನೂತನ ಶಾಸಕ ವೈ.ಎಸ್.ವಿ. ದತ್ತರವರಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಡೂರು ಕ್ಷೇತ್ರದಿಂದ ಆಯ್ಕೆಯಾಗಿರುವ ದತ್ತರವರು ಜನರ ಆಶೋತ್ತರಗಳಿಗೆ ಸ್ಪಂದಿಸುವ ಶಾಸಕರಾಗಿ ಹೊರ ಹೊಮ್ಮಲಿ ಎಂದರು.
ಸಮಾರಂಭದಲ್ಲಿ ಶಾಸಕ ವೈ.ಎಸ್.ವಿ.ದತ್ತರವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಎನ್.ಎಸ್.ಶಿವಸ್ವಾಮಿ, ಪಬ್ಲಿಕ್ ಟಿವಿಯ ಹೆಚ್.ಆರ್.ರಂಗನಾಥ್, ತಾಲೂಕು ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್, ರೋಟರಿ ಅಧ್ಯಕ್ಷ ಶಿವಾನಂದಯ್ಯ,ಲಯನ್ಸ್ ಅಧ್ಯಕ್ಷ ಸಿ.ಎನ್.ನರೇಂದ್ರ, ವಕೀಲರ ಸಂಘದ ಅಧ್ಯಕ್ಷ ಸಿ.ಎಲ್.ದೇವರಾಜ್, ವಾಣಿಜ್ಯೋದ್ಯಮಿಗಳ ಸಂಘದ ಅಧ್ಯಕ್ಷ ಬಿ.ಎಸ್.ನಾಗರಾಜ್, ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಶಿವಶಂಕರಪ್ಪ ಉಪಸ್ಥಿತರಿದ್ದರು.