ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನೌಕರರ ಸಂಘದ ಜಿಲ್ಲಾ ಅಧ್ಯಕ್ಷರ ಸ್ಥಾನಕ್ಕೆ ನಾಮಪತ್ರ

Lingaraj Badiger
Updated On : 6 Aug 2013, 11:02 am

ಚಿಕ್ಕಮಗಳೂರು: ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರ ಸ್ಥಾನಕ್ಕೆ ಸಿ.ಎಸ್. ಮಂಜುನಾಥ್‌ಸ್ವಾಮಿ ಸೋಮವಾರ ನಾಮಪತ್ರ ಸಲ್ಲಿಸಿದರು.  2013-18 ನೇ ಸಾಲಿನ ಅವಧಿಗೆ ಜಿಲ್ಲಾ  ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕೆ ಸಿ.ಎಸ್. ಮಂಜುನಾಥ್‌ಸ್ವಾಮಿ ಚುನಾವಣಾಧಿಕಾರಿ ಸತ್ಯನಾರಾಯಣ ಅವರಿಗೆ  ನಾಮಪತ್ರ ಸಲ್ಲಿಸಿದರು. ರಾಜ್ಯ ಪರಿಷತ್ ಸ್ಥಾನಕ್ಕೆ ಬಿ.ಎನ್. ರಾಜು, ಜಿಲ್ಲಾ ಖಜಾಂಚಿ ಸ್ಥಾನಕ್ಕೆ ಎಂ.ಟಿ. ಲೋಕೇಶಪ್ಪ ನಾಮಪತ್ರ ಸಲ್ಲಿಸಿದರು.
ಅರ್ಜಿ ಆಹ್ವಾನ
ಗ್ರಾಪಂ ಕಾರ್ಯಾಲಯ ಬಿಳೇಕಲ್ಲಹಳ್ಳಿ ವತಿಯಿಂದ ವಾಲ್ವಮನ್ ಕಮ್ ಮೆಕ್ಯಾನಿಕ್ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್  14 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಬಿಳೇಕಲ್ಲಹಳ್ಳಿ ಗ್ರಾಪಂ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ಚಿತ್ರ ರದ್ದು ಮಾಡಲು ಆಗ್ರಹ
ಶಿವಮೊಗ್ಗ: ಸಿಬಿಎಸ್‌ಸಿ ಪಠ್ಯಪುಸ್ತಕದಲ್ಲಿ ಝಾನ್ಸಿರಾಣಿ ಲಕ್ಷ್ಮೀಬಾಯಿಯವರನ್ನು ಹುಕ್ಕಾ ಹಿಡಿದಿರುವಂತೆ ಚಿತ್ರಿಸಿ ಅಪಮಾನ ಮಾಡಿದ ಪಠ್ಯಕ್ರಮವನ್ನು ಕೂಡಲೇ ರದ್ದುಮಾಡುವಂತೆ ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಿಬಿಎಸ್‌ಸಿ 5ನೇ ತರಗತಿಯ ಸಮಾಜವಿಜ್ಞಾನ ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಝಾನ್ಸಿಯ ಪಾತ್ರ ಎಂಬ ಅಧ್ಯಾಯದಲ್ಲಿ ಝಾನ್ಸಿರಾಣಿ ಲಕ್ಷ್ಮೀಬಾಯಿ ಅವರನ್ನು ಹುಕ್ಕಾ ಹಿಡಿದಿರುವಂತೆ ಚಿತ್ರಿಸಿ ಅಪಮಾನ ಮಾಡಿದ್ದಾರೆ. ಇದಕ್ಕೆ ಕಾರಣವಾದ ವ್ಯಕ್ತಿಗಳ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಝಾನ್ಸಿರಾಣಿ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಲಕ್ಷಾಂತರ ದೇಶಭಕ್ತರಿಗೆ ಪ್ರೇರಣೆಯಾಗಿದ್ದಾರೆ. ಆದರೆ, ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಕಾಂಗ್ರೆಸ್ ಸರ್ಕಾರ ದೇಶದ ಶ್ರೇಷ್ಠ ಇತಿಹಾಸಕ್ಕೆ ತಿಲಾಂಜಲಿ ನೀಡುವ ಮೂಲಕ ದೇಶದ್ರೋಹ ಕೃತ್ಯ ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರಚೋದನೆ: ಇದೇ ಕೇಂದ್ರ ಸರ್ಕಾರ ಒಂದೆಡೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಚಿತ್ರಗಳ ಮೇಲೆ ನಿಷೇಧ ವಿಧಿಸುವ ಕಾನೂನು ಜಾರಿಗೆ ತಂದಿದೆ. ಮತ್ತೊಂದೆಡೆ ಮಕ್ಕಳ ಪಠ್ಯಪುಸ್ತಕದಲ್ಲಿ ಹುಕ್ಕಾ ಸೇವನೆ ಚಿತ್ರವನ್ನು ಮುದ್ರಿಸಿ ಮಕ್ಕಳನ್ನು ವ್ಯಸನದೆಡೆಗೆ ಪ್ರಚೋದಿಸಿದೆ ಎಂದು ಆಪಾದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement