ಪದವಿ ಪ್ರವೇಶ; ಅವಧಿ ವಿಸ್ತರಣೆ
ಚಿಕ್ಕಮಗಳೂರು: ಪ್ರಸಕ್ತ ಸಾಲಿಗೆ ವಿವಿಧ ಸ್ನಾತಕೋತರ ಪದವಿಗಳ ಪ್ರಥಮ ಸೆಮಿಸ್ಟರ್ ಪ್ರವೇಶಾತಿಗೆ ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ದಂಡ ಶುಲ್ಕ 500 ರು. ಹಾಗೂ ತೃತೀಯ ಹಾಗೂ ಐದನೇ ಸೆಮಿಸ್ಟರ್‌ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ದಂಡ ಶುಲ್ಕ 300 ರು. ಗಳೊಂದಿಗೆ ಕೊನೆಯ ದಿನವನ್ನು ಆಗಸ್ಟ್ 17 ರವರೆಗೆ ವಿಸ್ತರಿಸಲಾಗಿದೆ. ಪಿಯುಸಿ ಪೂರಕ ಪರೀಕ್ಷೆಯಲ್ಲಿ ಪಾಸಾದವರಿಗೆ ದಂಡ ಶುಲ್ಕ ಇರುವುದಿಲ್ಲ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಉಪಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.