ಉಚಿತ ಆರೋಗ್ಯ ತಪಾಸಣೆ ಶಿಬಿರ
ಶೃಂಗೇರಿ: ತಾಲೂಕು ಸಾರ್ವಜನಿಕ ಆಸ್ಪತ್ರೆ, ರೋಟರಿ ಸಂಸ್ಥೆ ಹಾಗೂ ವಿದ್ಯಾಲಕ್ಷ್ಮಿ ಕ್ಲಿನಿಕ್, ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಪಟ್ಟಣದ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಔಷಧಿ ವಿತರಣೆ ಕಾರ್ಯಕ್ರಮ ನಡೆಯಿತು.
ರೋಟರಿ ಸಂಸ್ಥೆಯ ಅಧ್ಯಕ್ಷ ಮಹೇಶ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಉತ್ತಮ ಆರೋಗ್ಯದಿಂದ ಒಳ್ಳೆಯ ಜೀವನ ನಡೆಸಲು ಸಾಧ್ಯ ಎಂದರು. ಡಾ. ಅನಿತ್ ಕುಮಾರ್ ಮಾಹಿತಿ ನೀಡಿ, ಮಿತ ಆಹಾರ ಸೇವನೆ, ವ್ಯಾಯಾಮಗಳಿಂದ ಖಾಯಿಲೆಗಳಿಂದ ದೂರವಿರಲು ಸಾಧ್ಯ ಎಂದರು. ಸಹಾಯಕ ಠಾಣಾಧಿಕಾರಿ ರಾಜಶೇಖರ್ ಇದ್ದರು.