'ಹತಾಶೆಯಿಂದ ಆರೋಪ'
ಕ.ಪ್ರ.ವಾರ್ತೆ, ಕೊಪ್ಪ, ಆ.6
ಶೃಂಗೇರಿ ಕ್ಷೇತ್ರದ ಶಾಸಕರಿಗೆ ತನ್ನ ಕ್ಷೇತ್ರದ ಅಧಿಕಾರಿಗಳ ಮೇಲೆ ಹಿಡಿತ ಸಾಧಿಸುವಲ್ಲಿ ವಿಫಲವಾಗಿ ಹತಾಶೆಯ ಮನೋಭಾವದಿಂದ ವಿನಾಕಾರಣ ಕಾಂಗ್ರೆಸ್ ನಾಯಕರ ಮೇಲೆ ಗೂಬೆಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶೋಭಿಂತ್ ದೂರಿದ್ದಾರೆ.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಸರ್ಕಾರಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿಸುವ ದಂಧೆಯಲ್ಲಿ ನಿರಾತರಾಗಿದ್ದಾರೆ. ಆದ್ದರಿಂದ ಈ ಕ್ಷೇತ್ರದ ಅಧಿಕಾರಿಗಳೆಲ್ಲಾ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎಂದು ಶಾಸಕ ಡಿ.ಎನ್. ಜೀವರಾಜ್ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದರು.
ತುಕ್ಕು ಹಿಡಿದ ಆಡಳಿತ ಯಂತ್ರ: ಶಾಸಕರು ಅಧಿಕಾರಿಗಳ ಮೇಲೆ ಹಿಡಿತ ಸಾಧಿಸುವಲ್ಲಿ ವಿಫಲರಾದ ಕಾರಣ ತಾಲೂಕಿನ ಆಡಳಿತ ಯಂತ್ರ ತುಕ್ಕು ಹಿಡಿದು ನಿಂತಿದೆ. ಈ ಭಾಗದಲ್ಲಿ ಸಂಸದರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡದ ಬಳಿಕ ಅಧಿಕಾರಿಗಳು ಪ್ರವಾಹದಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಿರುವುದು ತಾಲೂಕಿನ ಅಧಿಕಾರಿಗಳ ಕಾರ್ಯವೈಕಾರಿಯನ್ನು ತೋರುತ್ತದೆ . ಇದರಿಂದ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹೊರತಾಗಿಲ್ಲ ಎಂದರು.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಂಸದರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸುಳ್ಳು ಭರವಸೆ ನೀಡಿದ್ದಾರೆ ಎಂದು ಶಾಸಕರು ಬಣ್ಣಿಸುತ್ತಿದ್ದಾರೆ. ಆದರೆ ಸಂಸದರು ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸದೇ ಇದ್ದುದರಿಂದ ತಾವೇ ಭೇಟಿ ನೀಡಿ, ಪರಿಹಾರ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆಂದು ಸ್ಪಷ್ಟಪಡಿಸಿದರು.
ಹಿತ ಕಾಯಲಿ: ಇನ್ನಾದರೂ ಇನ್ನೂಬ್ಬರು ಮೇಲೆ ಆರೋಪ ಮಾಡುವ ಬದಲು ಕ್ಷೇತ್ರದ ಹಾಗೂ ತಾಲೂಕಿನ ಹಿತಾಕಾಯುಕೊಳ್ಳುವ ಉದ್ದೇಶದಿಂದ ಶಾಸಕರು ಅಧಿಕಾರಗಳ ಮೇಲೆ ಹಿಡಿತ ಸಾಧಿಸಿ, ಆಡಳಿತ ಯಂತ್ರ ಸರಿಪಡಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು. ಉಪಾಧ್ಯಕ್ಷ ಓಣಿತೋಟ ರತ್ನಾಕರ್, ಇನೇಶ್, ಮಾವಿನ ಕಟ್ಟೆ ನವಿನ್ ಇತರರು ಇದ್ದರು.