ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ

Vishwanath S
Updated On : 8 Aug 2013, 12:18 pm

ಕ.ಪ್ರ.ವಾರ್ತೆ , ನ.ರಾ.ಪುರ ,  ಆ.7
ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಶಿಕ್ಷಣದಲ್ಲಿ ಮುನ್ನಡೆಯಬೇಕು ಎಂದು ಎಂದು ತಾಲೂಕು ದೈಹಿಕ ಪರಿವೀಕ್ಷಕ ಕೆ. ಮೌನೇಶ್ವರಾಚಾರ್ ಹೇಳಿದರು.
ಅವರು ಇಲ್ಲಿನ ಸರ್ಕಾರಿ ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ವಿಜ್ಞಾನ  ಗೋಷ್ಠಿ ಉದ್ಘಾಟಿಸಿ ಮಾತನಾಡಿದರು.
ವಿಜ್ಞಾನ ಗೋಷ್ಠಿ ನಡೆಸುವುದರಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು  ಸಹಕಾರಿಯಾಗಲಿದೆ ಎಂದರು. ತಾಲೂಕು ವಿಜ್ಞಾನ ಘಟಕದ ಅಧ್ಯಕ್ಷ ಬಿ. ಲಿಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಬೆಂಗಳೂರಿನ ಡಿ.ಎಸ್.ಇ.ಆರ್.ಟಿ. ನಿರ್ದೇಶನದಂತೆ ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದ ವಿಜ್ಞಾನ ಸ್ಪರ್ಧೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರೆ ಅವರು ಕೆಲವು ನಿಯಮ ಅನುಸರಿಸಬೇಕಾಗುತ್ತದೆ ಎಂದು ಅವರು ನಿಯಮಗಳ ಬಗ್ಗೆ ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಚ್.ಎಸ್. ಕೃಷ್ಣಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಮೂಢನಂಬಿಕೆ ತೊಡೆದುಹಾಕಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಸಭೆಯಲ್ಲಿ  ಉಪಪ್ರಾಚಾರ್ಯ ಎಂ. ಪ್ರಕಾಶ್, ಮುಖ್ಯ ಶಿಕ್ಷಕ ಧನಂಜಯ ಮೇದೂರು, ತೀರ್ಪುಗಾರರಾದ ಅನಂತ ಪದ್ಮನಾಭ, ಕೆ.ಎ. ಪ್ರಸನ್ನ ಉಪಸ್ಥಿತರಿದ್ದರು.
ಡಿ.ಎನ್. ಮಂಜುನಾಥ್ ಸ್ವಾಗತಿಸಿದರು. ಸೀತಾರಾಮೇಗೌಡ ನಿರೂಪಿಸಿದರು. ನಿತ್ಯ ವಂದಿಸಿದರು. ವಿಕ್ಷಾನ ಸ್ಫರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ  ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೀತಲ್ ಹಾಗೂ ಶಾರದಾ ವಿದ್ಯಾ ಮಂದಿರದ ಪಿ. ವಿಜೇತಾ ಆಯ್ಕೆಯಾದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement