ಬಿಜೆಪಿ ಪದಗ್ರಹಣ ಸಮಾರಂಭ
ಚಿಕ್ಕಮಗಳೂರು: ಭಾರತೀಯ ಜನತಾ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ನಗರದ ಪಾಂಚಜನ್ಯದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಕ್ಷೇತ್ರ ಸಮಿತಿ ವಕ್ತಾರ ಕೆಂಪನಹಳ್ಳಿ ಪುಷ್ಪರಾಜ್ ತಿಳಿಸಿದ್ದಾರೆ.
ಬಿಜೆಪಿ ನಗರ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಗರದ ಆರು ಶಕ್ತಿ ಕೇಂದ್ರ ಮತ್ತು ಗ್ರಾಮೀಣ ಪ್ರದೇಶದ 5 ಶಕ್ತಿ ಕೇಂದ್ರಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಪದಗ್ರಹಣ ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶಾಸಕ ಸಿ.ಟಿ. ರವಿ, ತಾಲೂಕು ಅಧ್ಯಕ್ಷ ಎನ್. ರವಿ ಸೇರಿದಂತೆ ವಿವಿಧ ಮುಖಂಡರ ಸಮ್ಮುಖದಲ್ಲಿ ಪದಗ್ರಹಣ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಸಬೇಕಾಗಿ ಮನವಿ ಮಾಡಿದ್ದಾರೆ.