ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನ

Srinivasa Murthy VN
Updated On : 12 Aug 2013, 11:35 am

ತರೀಕೆರೆ: ಯುವ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದ್ದಾರೆ.
 ತಾಲೂಕು ಯುವ ಕಾಂಗ್ರೆಸ್‌ನಿಂದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿ, ಪಕ್ಷದ ಸಂಘಟನೆಯಲ್ಲಿ ಪ್ರಬಲತೆ ತೋರಿಸಿದರೆ ಯಾರು ಬೇಕಾದರೂ ಪಕ್ಷದ ವಿವಿಧ ಹುದ್ದೆಗಳನ್ನು ಪಡೆಯಬಹುದಾಗಿದೆ, ಅಧಿಕಾರ ಮುಖ್ಯವಲ್ಲ, ಹೋಬಳಿ ಮತ್ತು ಬೂತ್ ಮಟ್ಟದಲ್ಲಿ ಹೆಚ್ಚಿನ ಸದಸ್ಯರನ್ನು ಸಂಘಟನೆ ಮಾಡಿ ಎಂದರು.
 ಮಾಜಿ ಶಾಸಕ ಎಸ್.ಎಂ. ನಾಗರಾಜ್ ಮಾತನಾಡಿ, ಯುವ ಕಾಂಗ್ರೆಸ್‌ನ್ನು ಸದೃಢಗೊಳಿಸಬೇಕು, ಇದರಿಂದ ಶೀಘ್ರದಲ್ಲೇ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚು ಅನುಕೂಲವಾಗುತ್ತೆದೆ ಎಂದರು. ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಎನ್. ಲೋಹಿತ್ ಮಾತನಾಡಿ, ತಾಲೂಕಿನಾದ್ಯಂತ ಯುವ ಕಾಂಗ್ರೆಸ್‌ಗೆ ಸದಸ್ಯರ ಸೇರ್ಪಡೆ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ, ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.
 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಘನಿ ಅನ್ವರ್ ಅಧ್ಯಕ್ಷತೆ ವಹಿಸಿ ಮಾತನಾಡಿ, 35 ವರ್ಷ ವಯಸ್ಸಿನೊಳಗಿರುವ ಎಲ್ಲ ಯುವಕರು ಯುವ ಕಾಂಗ್ರೆಸ್ ಸದಸ್ಯರಾಗಬಹುದಾಗಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಖಚಾಂಚಿ ಬಿ.ಎಸ್.ಆರ್. ಮಂಜುನಾಥ್, ಅಮ್ಜದ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ರವಿಕುಮಾರ್, ಕೋಟಿ ರಘು ಮಾತನಾಡಿದರು. ನಂದಕುಮಾರ್, ಮಹೇಶ್ವರಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement