ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ

Srinivasa Murthy VN
Updated On : 13 Aug 2013, 11:00 am

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಕ್ಕಳ ದಿನಾಚರಣೆ ಅಂಗವಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ  ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ  ನೀಡಲು ಉದ್ದೇಶಿಸಿದ್ದು, 15 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
   6 ರಿಂದ 15 ವರ್ಷ ವಯೋವುತಿಯೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ರು. 10,000 ಬಹುಮಾನ ಹಾಗೂ ಪ್ರಶಸ್ತಿ  ನೀಡಲಾಗುವುದು. ಅಸಾಧಾರಣ ಧೈರ್ಯ ಶೌರ್ಯ ಸಾಧಿಸಿರಬೇಕು. ಸಾಧನೆ ಜಿಲ್ಲಾ ಮಟ್ಟದಲ್ಲಿ ಗುರುತಿಸಿರಬೇಕು. ಈ ಬಗ್ಗೆ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರಬೇಕು.
  ಗ್ರಾಪಂ, ತಾಪಂ ವ್ಯಾಪ್ತಿಯ ಶಾಲಾ ಶಿಕ್ಷಕರು ಸಾಧನೆ  ಗುರುತಿಸಿ ಜಿಲ್ಲಾ ಮಟ್ಟಕ್ಕೆ ತಿಳಿಸಬಹುದು. ಪ್ರಶಸ್ತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಶೌರ್ಯ ಸಾಧನೆ ತೋರಿದ ಬಗ್ಗೆ ಆರಕ್ಷಕ ಇಲಾಖೆಯ ಪ್ರಾಥಮಿಕ ತನಿಖಾ ವರದಿ, ಜನ್ಮ ದಿನಾಂಕದ ಪ್ರಮಾಣಪತ್ರ, 2012ರ ಆಗಸ್ ತಿಂಗಳಿನಿಂದ ಜು. 2013ರೊಳಗೆ ನಡೆದ ಪ್ರಕರಣವಾಗಿದ್ದು, ಪ್ರಕಟಿತ ಪತ್ರಿಕಾ ತುಣುಕುಗಳೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ನಿಗದಿತ ನಮೂನೆಯ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೂರಡಿ ರಸ್ತೆ, ಪೃಥ್ವಿ ಮ್ಯಾನ್ಶನ್, ವಿನೋಬ ನಗರ, ಶಿವಮೊಗ್ಗ ಇವರಿಂದ ಪಡೆದು, ಸೆ.10ರೊಳಗಾಗಿ ಸಲ್ಲಿಸಬೇಕು. ವಿವರಗಳಿಗಾಗಿ ದೂ.ಸಂ. 08182 249034 ಸಂಪರ್ಕಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement