ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅಜ್ಞಾನ ತೋರ್ಪಡಿಕೆಯೇ ದೌರ್ಜನ್ಯಕ್ಕೆ ಕಾರಣ

Lingaraj Badiger
Updated On : 14 Aug 2013, 11:00 am

ಚಿಕ್ಕಮಗಳೂರು: ಭಾರತೀಯ ಸಮಾಜದಲ್ಲಿ ಮಹಿಳೆ ಮತ್ತು ಮಕ್ಕಳಲ್ಲಿ ಕಂಡು ಬರುತ್ತಿರುವ ಅಜ್ಞಾನವನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ಅಂತಹವರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಸವರಾಜ್ ಎ. ಪಾಟೀಲ್ ಹೇಳಿದ್ದಾರೆ.
ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ ನಡೆದ ಕಾನೂನು ಅರಿವು- ನೆರವು ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ನಮ್ಮ ಅಜ್ಞಾನವನ್ನು ತೋರ್ಪಡಿಸಿಕೊಂಡರೆ, ಅದರ ಲಾಭ ಪಡೆದುಕೊಳ್ಳುವ ಮೂಲಕ ದೌರ್ಜನ್ಯವೆಸಗಲು ಪ್ರೇರಣೆಯಾಗುತ್ತದೆ. ಈ ನಿಟ್ಟಿನಲ್ಲಿ ಕಾನೂನಿನ ಜ್ಞಾನ ಪಡೆಯುವುದರೊಂದಿಗೆ ದೌರ್ಜನ್ಯಕ್ಕೊಳಗಾಗುವುದನ್ನು ತಪ್ಪಿಸಿಕೊಳ್ಳುವ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣ ಮಾಡಲು ಸಾಧ್ಯ ಎಂದು ತಿಳಿಸಿದರು.
ಸದುಪಯೋಗವಾಗಲಿ: ಮಹಿಳೆಯರಿಗೆ ಕ್ಷಿಪ್ರಗತಿಯಲ್ಲಿ ಪರಿಹಾರ ದೊರಕಿಸಿಕೊಡುವ ಸದುದ್ದೇಶದೊಂದಿಗೆ ಸರ್ಕಾರವು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ ತಂದಿದ್ದು, ಈ ಕಾಯ್ದೆಯನ್ನು ಮಹಿಳೆಯರು ಅಸ್ತ್ರವಾಗಿ ಬಳಸದೇ ಕವಚವನ್ನಾಗಿ ಬಳಸಿಕೊಳ್ಳುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ವಕೀಲರಾದ ಹೆಚ್.ಸಿ. ನಟರಾಜ್ ಅವರು ಮಹಿಳೆ ಮತ್ತು ಮಕ್ಕಳ ಸಂರಕ್ಷಣೆ ಹಾಗೂ ಕೆ.ಎನ್. ಚಂದ್ರಶೇಖರ್ ಅವರು ಕೌಟುಂಬಿಕ ದೌರ್ಜನ್ಯಗಳಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಎಂಬ ವಿಷಯಗಳ ಕುರಿತು ಉಪನ್ಯಾಸ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ಅಫ್ತಾಬ್ ಅಹಮದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಮಹದೇವಯ್ಯ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಆರ್. ವೆಂಕಟೇಶ್ ಉಪಸ್ಥಿತರಿದ್ದರು.
ವೆಂಕಟೇಶ್ ಸ್ವಾಗತಿಸಿದರು, ಎಚ್.ಎಸ್. ಸುರೇಶ್ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement