ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಶೃಂಗೇರಿ: ಪಟ್ಟಣದ ವಸತಿಗೃಹವೊಂದರಲ್ಲಿ ದಂಹತಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಸಂಜೆಯ ವೇಳೆ ನಡೆದಿದೆ. ಬೆಂಗಳೂರು ಮೂಲದ ರಾಮಪ್ಪ (70) ಮತ್ತು ಸರೋಜಮ್ಮ ಇಲ್ಲಿನ ವಸತಿಗೃಹದಲ್ಲಿನ ಕೊಠಡಿಯಲ್ಲಿ ವಿಷ ಸೇವಿಸಿದ್ದರು. ನಮ್ಮ ಸಾವಿಗೆ ನಾವೇ ಕಾರಣ ಎಂಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಫಲಕಾರಿಯಾಗದೇ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.