ದೇಶಭಕ್ತರ ಆದರ್ಶ ಪಾಲಿಸಿ: ಗಂಗಾಧರ್
ಮೂಡಿಗೆರೆ: ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡಲು ಅವಿರತವಾಗಿ ಶ್ರಮಿಸಿದ ಮಹಾತ್ಮಾಗಾಂಧಿ, ಸ್ವಾಮಿ ವಿವೇಕಾನಂದ, ಸುಭಾಶ್ಚಂದ್ರ ಬೋಸ್, ಕಿತ್ತೂರು ರಾಣಿ ಚೆನ್ನಮ್ಮ ಅವರಂತಹ ದೇಶಭಕ್ತರು ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡಲು ಪ್ರಾಣ ತ್ಯಾಗ ಮಾಡಿದವರು. ಅಂಥಹವರ ಆದರ್ಶ ಪಾಲಿಸಬೇಕು ಎಂದು ತಾಲೂಕು ನೌಕರರ ಸಂಘದ ಅಧ್ಯಕ್ಷ ಎಂ. ಗಂಗಾಧರ್ ತಿಳಿಸಿದರು. ಪಟ್ಟಣದ ನೌಕರರ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಇಂದಿಗೆ ಭಾರತಕ್ಕೆ ಸ್ವಾತಂತ್ರ್ಯ ದೊರೆತು 67 ವರ್ಷಗಳು ಸಂದಿವೆ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಸೇರಿದಂತೆ ಹಲವು ಮಹಾನಿಯರು ಬ್ರಿಟೀಷರನ್ನು ಭಾರತದಿಂದ ಓಡಿಸಲು ಶ್ರಮಿಸಿದ್ದಾರೆ ಎನ್ನುವುದನ್ನು ಪ್ರತಿಯೊಬ್ಬರೂ ನೆನಪಿನಲ್ಲಿಡ ಬೇಕು ಎಂದರು.
ಈಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯ ಸುರೇಶ್‌ಗೌಡ, ಧರ್ಮಪ್ಪ, ಜಗನ್ನಾಥ್, ಮಂಜುನಾಥ್ ಸೇರಿದಂತೆ ಸಂಘದ ಸದಸ್ಯರು ಇದ್ದರು.