ಧ.ಗ್ರಾ.ಯೋಜನೆಯಿಂದ ಸ್ವಚ್ಛತಾ ಕಾರ್ಯಕ್ರಮ
ನರಸಿಂಹರಾಜಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಾಗರಿಕ ಪ್ರಜ್ಞೆ ಹಾಗೂ ಗ್ರಾಮ ನೈರ್ಮಲ್ಯ ಅರಿವು ಕಾರ್ಯಕ್ರಮ ಶೆಟ್ಟಿಕೊಪ್ಪ ನವಗ್ರಾಮ ಕಾಲೋನಿಯಲ್ಲಿ ಗುರುವಾರ ನಡೆಯಿತು. ಕಡಹಿನಬೈಲು ಗ್ರಾಪಂ ಅಧ್ಯಕ್ಷ ಚಂದ್ರಶೇಖರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಧ.ಗ್ರಾ.ಯೋಜನೆಯಿಂದ ಸಮಾಜ ಪರಿವರ್ತನೆಯ ಹಾದಿಯಲ್ಲಿದೆ. ಗ್ರಾಮೀಣಾಭಿವೃದ್ಧಿಯಲ್ಲಿ ಸಾಮಾಜಿಕ ಕ್ರಾಂತಿ ಉಂಟು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಯೋಜನೆಯ ವ್ಯವಸ್ಥಾಪಕ ಕವಿತ ಮಾತನಾಡಿ, 3 ತಾಲೂಕುಗಳ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ 36 ಗ್ರಾಮಗಳಲ್ಲಿ ಸ್ವಚ್ಛತಾ ಅರಿವು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಎನ್.ಎಂ. ಕಾಂತರಾಜ್, ರೆ.ಫಾ. ಜೋಸ್, ಎಂ.ಟಿ. ಕುಮಾರ್, ಶೈಲಾ ಮಹೇಶ್, ಗ್ರೇಸಿ ಬಾಬು, ಸತೀಶ್, ಅನೂಪ್ ಕುಮಾರ್ ಇದ್ದರು. ಕಾರ್ಯಕ್ರಮದ ನಂತರ ಕಾಲೋನಿಯ ಚರಂಡಿ ಸ್ವಚ್ಛತೆ ಮಾಡಲಾಯಿತು.