ವಿದ್ಯಾರ್ಥಿಗಳು ರಂಗಭೂಮಿಯಲ್ಲಿ ತೊಡಗಲಿ
ಕ.ಪ್ರ.ವಾರ್ತೆ, ಶೃಂಗೇರಿ, ಆ.16
ರಂಗಭೂಮಿ ಹತ್ತುಹಲವು ಕಲೆಗಳನ್ನು ಹೊಂದಿರುವ ಒಂದು ಸಂಕೀರ್ಣ ಕಲೆಯಾಗಿದ್ದು ಇದು ಮನುಷ್ಯನ ವ್ಯಕ್ತಿತ್ವ ವಿಕಸನದಲ್ಲಿ ಮಹತ್ತರ ಪಾತ್ರ ವಹಿಸುತ್ತದೆ.
ವಿದ್ಯಾರ್ಥಿಗಳು ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶೃಂಗೇರಿ ಸರ್ಕಾರಿ ಪ್ರೌಡಶಾಲೆಯ ಶಾಲಾಭಿವೃದ್ಧಿ ಸಮೀತಿ ಅಧ್ಯಕ್ಷ ಕೃಷ್ಣಮೂರ್ತಿ ಕರೆ ನೀಡಿದರು.
ಡಯೆಟ್ ಚಿಕ್ಕಮಗಳೂರು, ಸಾರ್ವಜಿನಕ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ದೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟಿ.ವಿ. ಧಾರಾವಾಹಿ, ಸಿನೆಮಾ ಹಾವಳಿಗಳ ನಡುವೆಯೂ ರಂಗಕಲೆಗಳನ್ನು ಉಳಿಸ ಬೇಕಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾಗಿದೆ.
ರಂಗಭೂಮಿ ಕೇವಲ ಮನರಂಜನೆಯ ಚಟುವಟಿಕೆಗಳಿಗೆ ಸೀಮಿತವಾಗಿರದೆ ವಿಭಿನ್ನ, ವಿಶಿಷ್ಟ ಚಟುವಟಿಕೆಗಳ ಮೂಲಕ ಸಮಾಜದ ಹಲವು ಮುಖಗಳನ್ನು ಪರಿಚಯಿಸುವುದರ ಮೂಲಕ ಸಮಾಜಮುಖಿಯಾಗಿದೆಅಲ್ಲದೇ ಬೇರೆ ಬೇರೆ ಸಂಸ್ಕೃತಿಗಳ ಪರಿಚಯವನ್ನು ಮಾಡಿಸಿಕೊಡುತ್ತದೆ ಎಂದರು. ಶಿವಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಾವಿನಕಾಡು ರಂಗನಾಥ್, ಕಾಲೇಜಿನ ಉಪಪ್ರಾಚಾರ್ಯ ವಿಜಯ್ ಕುಮಾರ್ ಮತ್ತಿತರರು ಇದ್ದರು.