ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಅರಿಶಿಣ, ಕುಂಕುಮಕ್ಕೆ ವಿಶೇಷ ಸ್ಥಾನ'

Rashmi Kasaragodu
Updated On : 21 Aug 2013, 11:54 am

ಬಾಳೆಹೊನ್ನೂರು: ಹಿಂದೂ ಸಂಸ್ಕೃತಿಯಲ್ಲಿ ಅರಿಶಿಣ, ಕುಂಕುಮ, ಹೂ, ಬಳೆಗಳಿಗೆ ವಿಶೇಷ ಸ್ಥಾನಮಾನವಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರುತಿ ಹೇಳಿದ್ದಾರೆ.
ಸಮೀಪದ ಮೆಣಸುಕೊಡಿಗೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅನ್ನಪೂರ್ಣೇಶ್ವರಿ ಜ್ಞಾನವಿಕಾಸ ಕೇಂದ್ರ ಸೋಮವಾರ ಆಯೋಜಿಸಿದ್ದ ಮಹಿಳೆಯರಿಗೆ ಅರಿಶಿಣ- ಕುಂಕುಮ ನೀಡುವ ಕಾರ್ಯಕ್ರಮ ಹಾಗೂ ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜ್ಞಾನ ಹೆಚ್ಚಿಸಿಕೊಳ್ಳಿ: ಹಿಂದೂ ಸಂಸ್ಕೃತಿಯಲ್ಲಿ ಪ್ರತಿಯೊಂದು ಸಂಪ್ರದಾಯಕ್ಕೂ ವಿವಿಧ ವೈಜ್ಞಾನಿಕ ಕಾರಣಗಳಿದ್ದು, ಅವುಗಳನ್ನು ಮಹಿಳೆಯರು ತಿಳಿದುಕೊಳ್ಳಬೇಕಾದ ಅಗತ್ಯವಿದೆ. ಜ್ಞಾನವಿಕಾಸದ ಕಾರ್ಯಕ್ರಮಗಳಲ್ಲಿ ಮಹಿಳೆಯರು ಭಾಗವಹಿಸುವುದರಿಂದ ಸಾರ್ವಜನಿಕವಾಗಿ ಅಭಿವೃದ್ಧಿ ಹೊಂದಿ ಜ್ಞಾನ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದರು.
ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಭಗವಾನ್ ಮಾತನಾಡಿ, ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಆರೋಗ್ಯವನ್ನು ಸಮತೋಲನವಾಗಿ ಕಾಪಾಡಿಕೊಳ್ಳಬಹುದು. ಕಾಲಕ್ಕನುಗುಣವಾಗಿ ಮಿತವಾದ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ಲಭ್ಯವಾಗಲಿದೆ ಎಂದು ಹೇಳಿದರು.
ಸೊಪ್ಪು, ತರಕಾರಿ ಬಳಸಿ: ಪ್ರಸ್ತುತ ದಿನಗಳಲ್ಲಿ ರಾಸಾಯನಿಕ ವಸ್ತುಗಳನ್ನು ಬಳಸಿ ಬೆಳೆದ ಆಹಾರಗಳ ಸೇವನೆ ಮಾಡುತ್ತಿರುವುದರಿಂದ ಮನುಷ್ಯರ ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಸಾಯನಿಕ ಬಳಸಿದ ತರಕಾರಿಗಳ ಸೇವನೆಯನ್ನು ಕಡಿಮೆಗೊಳಿಸಿ ತಮ್ಮ ಸುತ್ತಮುತ್ತ ದೊರೆಯುವ ಸೊಪ್ಪು ಮತ್ತಿತರರ ತರಕಾರಿಗಳನ್ನು ಬಳಸುವಂತೆ ತಿಳಿಸಿದರು.
ಸ್ಥಳೀಯ ಜ್ಞಾನ ವಿಕಾಸ ಸಂಯೋಜಕಿ ಸುಲೋಚನ ಅಧ್ಯಕ್ಷತೆ ವಹಿಸಿದ್ದರು. ನರಸಿಂಹರಾಜಪುರ ತಾಪಂ ಸದಸ್ಯೆ ಹೇಮಲತಾ ಪ್ರಭಾಕರ್, ಗ್ರಾಮಾಭಿವೃದ್ಧಿ ಒಕ್ಕೂಟದ ಅಧ್ಯಕ್ಷೆ ರೋಹಿಣಿ, ಸವಿತಾ, ಕವಿತಾ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲ ಮಹಿಳೆಯರಿಗೆ ಅರಿಶಿಣ- ಕುಂಕುಮ, ಹೂ, ಬಳೆ ಹಾಗೂ ವೀಳ್ಯ ನೀಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement