ಉತ್ತಮ ಸಂದೇಶ ನೀಡುತ್ತಿದ್ದ ನಾಟಕ, ಸಿನಿಮಾ ನಾಪತ್ತೆ
ನರಸಿಂಹರಾಜಪುರ: ಹಿಂದೆ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದ್ದ ನಾಟಕ, ಸಿನಿಮಾಗಳು ಮಾನವೀಯ ಸಂಬಂಧಗಳನ್ನು ಬೆಳಸಲು ಸಹಾಯಕವಾಗುತ್ತಿದ್ದವು ಎಂದು ಶಿವಮೊಗ್ಗ ತಾಲೂಕಿನ ಶೆಟ್ಟಿಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಬಿ.ಎಸ್. ನಾಗೇಶ್ ತಿಳಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಸಾಂಸ್ಕೃತಿಕ, ಕ್ರೀಡಾ, ರಾಷ್ಟೀಯ ಸೇವಾ ಯೋಜನೆ ಹಾಗೂ ವಿವಿಧ ವೇದಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಪಿ. ಸಂಪತ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾಂಸ್ಕೃತಿಕ ವೇದಿಕೆಯ ಸಂಚಾಲಕ ಅಣ್ಣಪ್ಪ ಮಳೀಮಠ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ವರ್ಗಾವಣೆಗೊಂಡ ದೈಹಿಕ ಶಿಕ್ಷಣ ನಿರ್ದೇಶಕ ವಿಶ್ವನಾಥ್ರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.