ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಾಹನ ಉರುಳಿ ಮಕ್ಕಳಿಗೆ ಗಾಯ

Lingaraj Badiger
Updated On : 2 Dec 2013, 11:39 am

ಮೂಡಿಗೆರೆ: ದಕ್ಷಿಣ ಕನ್ನಡ ಜಿಲ್ಲೆಯ ಕೆಮ್ಮಾಯಿ ಮದರಾಸದಿಂದ ಜಾವಗಲ್‌ಗೆ ಹೊರಟಿದ್ದ ವ್ಯಾನ್ ಕೊಟ್ಟಿಗೆಹಾರ ಸಮೀಪ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದ್ದರ ಪರಿಣಾಮ ಚಾಲಕ ಸೇರಿದಂತೆ 13 ಮಕ್ಕಳಿಗೆ ಗಾಯವಾದ ಘಟನೆ ಭಾನುವಾರ ನಡೆದಿದೆ. ಪುತ್ತೂರಿನ ಮುಹಿಲ್ಲಾ ಇಸ್ಲಾಂ ಮದರಾಸದಿಂದ ಜಾವಗಲ್‌ಗೆ ಬಾಲಕರು ಸೇರಿದಂತೆ 30 ಜನರು ಪ್ರವಾಸ ಹೊರಟಿದ್ದರು. ಗಾಯಾಳುಗಳು ಮೂಡಿಗೆರೆ ಸರ್ಕಾರಿ ಆಸ್ಪತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಾಮಾನ್ಯ ಸಭೆ
ಚಿಕ್ಕಮಗಳೂರು: ಜಿಪಂ ಮುಂದೂಡಿದ ಸರ್ವ ಸದಸ್ಯರ ಸಾಮಾನ್ಯ ಸಭೆ ಡಿ. 7 ರಂದು ಬೆಳಗ್ಗೆ 11.30ಕ್ಕೆ ಜಿಪಂ ಸಭಾಂಗಣದಲ್ಲಿ ಅಧ್ಯಕ್ಷೆ ಜೆ.ಎಸ್. ರೇಖಾ ಹುಲಿಯಪ್ಪಗೌಡ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ರೀಡಾಕೂಟ
ಚಿಕ್ಕಮಗಳೂರು: ವಿಕಲಚೇತನರ ದಿನಾಚರಣೆ ಅಂಗವಾಗಿ ಡಿ. 3ರಂದು ಜಿಲ್ಲಾ ಆಟದ ಮೈದಾನದಲ್ಲಿ ಚಿಕ್ಕಮಗಳೂರು ತಾಲೂಕಿನ ವಿಕಲಚೇತನರಿಗೆ ಕ್ರೀಡಾಕೂಟವನ್ನು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಏರ್ಪಡಿಸಲಾಗಿದೆ. ಈ ಕ್ರೀಡಾಕೂಟದ ಆಟೋಟ ಸ್ಪರ್ಧೆಯಲ್ಲಿ ವಿಕಲಚೇತನರು ಭಾಗವಹಿಸಬಹುದು.
ಅಂದು ಮಧ್ಯಾಹ್ನ ವಿಶ್ವ ವಿಕಲಚೇತನರ ದಿನಾಚರಣೆಯ ಬಹುಮಾನ ವಿತರಣಾ ಸಮಾರಂಭವನ್ನು ಜಿಲ್ಲಾ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೋರಿದ್ದಾರೆ.
ಅವಧಿ ವಿಸ್ತರಣೆ
ಚಿಕ್ಕಮಗಳೂರು: ಮತದಾರರ ಪಟ್ಟಿ ಪರಿಷ್ಕರಣೆ- 2014 ಸಂಬಂಧ ಹೆಸರು ಸೇರ್ಪಡೆ, ಬಿಡತಕ್ಕವು ಮತ್ತು ತಿದ್ದುಪಡಿ ಅರ್ಜಿ ಸಲ್ಲಿಸಲು ನ. 29 ರವರೆಗೆ ಇದ್ದ ಅವಧಿಯನ್ನು ಡಿ. 12 ರವರೆಗೆ ವಿಸ್ತರಿಸಿ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಈ ಅವಕಾಶ ಸದುಪಯೋಗಪಡಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾಷಣ ಸ್ಪರ್ಧೆ
ಚಿಕ್ಕಮಗಳೂರು: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ವತಿಯಿಂದ ಡಿ. 2 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ಬಾಲಭವನ (ಟಿಎಂಎಸ್ ಶಾಲೆ ಪಕ್ಕ) ಚಿಕ್ಕಮಗಳೂರು ಇಲ್ಲಿ ತಾಲೂಕು ಮಟ್ಟದ ಸರ್ಕಾರಿ, ಖಾಸಗಿ ಪ್ರೌಢಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬಾಲ್ಯವಿವಾಹ ನಿಷೇಧ ಕುರಿತು ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ. ಭಾಗವಹಿಸುವ ವಿದ್ಯಾರ್ಥಿಗಳು ಶಾಲಾ ಮುಖ್ಯಸ್ಥರಿಂದ ದೃಢೀಕರಣ ಪತ್ರದೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಚಿಕ್ಕಮಗಳೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇವರನ್ನು ಸಂಪರ್ಕಿಸಬಹುದು.

'ಕೃಷಿ ಆಯೋಗ ರಚಿಸಲು ಉಪ ಸಮಿತಿ'
ಚಿಕ್ಕಮಗಳೂರು: ಕೃಷಿ ಆಯೋಗ ರಚನೆ ಸಂಬಂಧ ವರದಿ ನೀಡಲು ಸಚಿವ ಸಂಪುಟದ ಉಪ ಸಮಿತಿ ರಚನೆ ಮಾಡಲಾಗಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಈ ಸಮಿತಿ ವರದಿ ನೀಡಿದ ಬಳಿಕವಷ್ಟೇ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು. ಈ ಆಯೋಗ ರಚನೆಗೆ ಇನ್ನಷ್ಟು ಕಾಲಾವಕಾಶ ಬೇಕಾಗಿದೆ ಎಂದು ಮಲ್ಲಂದೂರಿನಲ್ಲಿ ಸುದ್ದಿಗಾರರೊಂದಿಗೆ ತಿಳಿಸಿದರು. ರಾಜ್ಯಕ್ಕೆ ಹೋಲಿಸಿದರೆ ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ತೀವ್ರ ಗಂಭೀರವಾಗಿದೆ. ಆದರೆ, ನಮ್ಮ ರಾಜ್ಯದಲ್ಲಿ ಅಂತಹ ಬಿಕ್ಕಟ್ಟಿನ ಪರಿಸ್ಥಿತಿ ಇಲ್ಲ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನ ಮಾಡುತ್ತಿದೆ. ಈ ಬಗ್ಗೆ ರೈತರು ಮತ್ತು ಪ್ರತಿಪಕ್ಷಗಳು ಅವಲೋಕನ ಮಾಡಬೇಕು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement