ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸಿಗದ 'ಶಾಸ್ತ್ರೀಯ' ಅನುದಾನ

Lingaraj Badiger
Updated On : 2 Dec 2013, 11:31 am

ಕ.ಪ್ರ.ವಾರ್ತೆ, ಬಾಳೆಹೊನ್ನೂರು, ಡಿ. 1
ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಮಾನ್ಯತೆ ನೀಡಿದ್ದರೂ ಕೇಂದ್ರ ಸರ್ಕಾರ ಕನ್ನಡ ಅಭಿವೃದ್ಧಿಗೆ ಯಾವುದೇ ಅನುದಾನ ಬಿಡುಗಡೆ ಮಾಡದಿರುವುದು ವಿಷಾದನೀಯ ಎಂದು ತಾಲ್ಲೂಕು ಕಸಾಪ ಅಧ್ಯಕ್ಷ ಎಸ್.ಜಿ. ಕೃಷ್ಣಮೂರ್ತಿ ಹೇಳಿದ್ದಾರೆ.
ಇಲ್ಲಿನ ಸಾಂಸ್ಕೃತಿಕ ಸಂಘ ವಿದ್ಯಾಗಣಪತಿ ಸಮುದಾಯ ಭವನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಇತ್ತೀಚೆಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ದೇಶದ ಎಲ್ಲಾ ಭಾಷೆಗಳಿಗಿಂತ ಕನ್ನಡ ಭಾಷೆಗೆ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದಿರುವುದು ಮಹತ್ ಸಾಧನೆಯಾಗಿದೆ. ವಿದ್ಯಾರ್ಥಿಗಳು ಸಾಹಿತ್ಯವನ್ನು ಅಧ್ಯಯನ ಮಾಡಿಕೊಂಡು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ಇದಕ್ಕೂ ಮುನ್ನ ನಡೆದ ಸಮಾರಂಭವನ್ನು ಗ್ರಾ.ಪಂ. ಉಪಾಧ್ಯಕ್ಷೆ ಹೂವಮ್ಮ ಪರಮೇಶ್ವರಗೌಡ ಉದ್ಘಾಟಿಸಿದರು. ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಿ.ಕೆ. ಮಹಮ್ಮದ್ ಆಲಿ ಅಧ್ಯಕ್ಷತೆ ವಹಿಸಿದ್ದರು. ಎಸ್‌ಜೆಆರ್ ಐಟಿಐ ಕಾಲೇಜಿನ ಪ್ರಾಚಾರ್ಯ ಎಚ್.ಆರ್. ಆನಂದ್, ಹೋಬಳಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಶಹಾಬ್, ಖಾಂಡ್ಯ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಬಿ.ಎನ್. ಸೋಮೇಶ್, ಮಸೀಗದ್ದೆ ಸತೀಶ್, ಬಿಎಸ್‌ಎನ್‌ಎಲ್ ನಿವೃತ್ತ ನೌಕರ ಹಿರಿಯಣ್ಣ, ದಿವ್ಯಭಾರತಿ ಮಹಿಳಾ ಮಂಡಳಿಯ ಲಿಲ್ಲಿ ಗಣೇಶ್ ಉಪಸ್ಥಿತರಿದ್ದರು.
ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಟಿ.ಆರ್. ನಾಗಪ್ಪಗೌಡ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಚಂದನ ಎಂ. ಪಟೇಲ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಸಮಾರಂಭಕ್ಕೂ ಮುನ್ನಾ ದಿನ ನಡೆದ ವಾಲಿಬಾಲ್ ಪಂದ್ಯಾವಳಿಯನ್ನು ತಾಲ್ಲೂಕು ಬಿಜೆಪಿ ಅಧ್ಯಕ್ಷ ಭಾಸ್ಕರ್ ವೆನಿಲ್ಲಾ ಉದ್ಘಾಟಿಸಿದರು. ಬಿಲ್ಲವ ಸಂಘದ ಅಧ್ಯಕ್ಷ ವಿ.ಜಿ. ನಾರಾಯಣ, ತಂಗವೇಲು, ಜಿ.ಪಂ. ಸದಸ್ಯ ಮಹಮ್ಮದ್ ಇಫ್ತೆಖಾರ್ ಆದಿಲ್, ಜಿಲ್ಲಾ ಚುಸಾಪ ಅಧ್ಯಕ್ಷ ಯಜ್ಞ ಪುರುಷಭಟ್, ಬಿ. ಕಣಬೂರು ಗ್ರಾ.ಪಂ. ಸದಸ್ಯ ಮಹಮ್ಮದ್ ಹನೀಫ್, ಯಶವಂತ್, ದೇವದಾನ ಗ್ರಾ.ಪಂ. ಉಪಾಧ್ಯಕ್ಷ ಎಸ್.ಜೆ. ಜಯಶೀಲ ಉಪಸ್ಥಿತರಿದ್ದರು.
ತಾಲ್ಲೂಕು ಚುಸಾಪ ಅಧ್ಯಕ್ಷ ಚೈತನ್ಯ ವೆಂಕಿ, ಸಂಘದ ಕಾರ್ಯದರ್ಶಿ ಸುಧಾಕರ್, ಹೋಬಳಿ ಕಸಾಪ ಅಧ್ಯಕ್ಷ ರಾ. ವೆಂಕಟೇಶ್, ಸಿ.ಎಸ್. ರಮೇಶ್, ಮಂಜು, ಜಂಶೀದ್ ಅಹ್ಮದ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement