ಕಿಗ್ಗಾದಲ್ಲಿ ಸೀಮೆ ದೀಪೋತ್ಸವ
ಶೃಂಗೇರಿ: ತಾಲೂಕಿನ ಮರ್ಕಲ್ ಪಂಚಾಯಿತಿ ವ್ಯಾಪ್ತಿಯ ಮಳೆ ದೇವರು ಕಿಗ್ಗಾ ಋಷ್ಯಶೃಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಸೋಮವಾರ ಸೀಮೆ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು. ದೀಪೋತ್ಸವದ ಅಂಗವಾಗಿ ವಿಶೇಷ ಪೂಜೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಮಳೆ, ಬೆಳೆ ಸಮೃದ್ಧಿಗಾಗಿ ನೆಮ್ಮಾರು ಸೀಮೆಯವರಿಂದ ರುದ್ರಹೋಮ ನಡೆಯಿತು. ನೂರಾರು ಮಂದಿ ಭಕ್ತಾದಿಗಳು ಇದ್ದರು.