ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಬಸ್ ಸೌಲಭ್ಯಕ್ಕೆ ಆಗ್ರಹ

Lingaraj Badiger
Updated On : 4 Dec 2013, 10:50 am

ಚಿಕ್ಕಮಗಳೂರು: ನಗರ ಹೊರವಲಯದಲ್ಲಿ ನಿರ್ಮಾಣಗೊಂಡಿರುವ ರೈಲು ನಿಲ್ದಾಣಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್‌ಗಳನ್ನು ನಿಯೋಜಿಸುವಂತೆ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ನಗರದಿಂದ ರೈಲು ನಿಲ್ದಾಣ 2 ಕಿ.ಮೀ. ನಷ್ಟು ದೂರವಿರುವುದರ ಜೊತೆಗೆ ರೈಲು ನಸುಕಿನಲ್ಲಿ ಮತ್ತು ರಾತ್ರಿ ವೇಳೆ ಸಂಚರಿಸುವುದರಿಂದ ನಿಲ್ದಾಣಕ್ಕೆ ಹೋಗಲು ಪ್ರಯಾಣಿಕರು ದುಬಾರಿ ಹಣವನ್ನು ತೆತ್ತು ಆಟೋಗಳಲ್ಲಿ ಸಂಚರಿಸುವಂತಾಗಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಎಸ್. ಗಂಗಾಧರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೈಲು ಸಂಚರಿಸುವ ವೇಳೆ ರೈಲು ನಿಲ್ದಾಣಕ್ಕೆ ಬಸ್‌ಗಳನ್ನು ಬಿಡಬೇಕು ಅದರ ಜೊತೆಗೆ ಆ ಭಾಗದಲ್ಲಿ ಸಂಚರಿಸುವ ಬಸ್‌ಗಳಿಗೂ ಪ್ರಯಾಣಿಕರ ಹಿತದೃಷ್ಟಿಯಿಂದ ರೈಲು ನಿಲ್ದಾಣದ ಬಳಿ ನಿಲುಗಡೆ ಮಾಡುವಂತೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನಗರದಿಂದ ಮೈಸೂರು, ಬೆಂಗಳೂರು ಮತ್ತು ಮಂಗಳೂರಿಗೆ ರೈಲು ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement