ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ರೈತರ ಮೇಲೆ ಲಾಠಿ ಪ್ರಹಾರ: ಪ್ರತಿಭಟನೆ

Lingaraj Badiger
Updated On : 4 Dec 2013, 10:51 am

ಚಿಕ್ಕಮಗಳೂರು: ರಾಯಚೂರಿನಲ್ಲಿ ರೈತರ ಮೇಲೆ ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸಿ ಇಲ್ಲಿನ ಹನುಮಂತಪ್ಪ ವೃತ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಕರ್ನಾಟಕದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ರೈತರ ಹೋರಾಟಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿವೆ. ರೈತರ ಮತ್ತು ಕಾರ್ಮಿಕರ ಸ್ಥಿತಿ ಶೋಚನೀಯವಾಗಿದ್ದು, ತಮ್ಮ ಹಕ್ಕು ಮತ್ತು ಬೇಡಿಕೆಗಳಿಗಾಗಿ ಹೋರಾಟ ಮಾಡದಂತಹ ಸ್ಥಿತಿ ನಿರ್ಮಾಣಗೊಂಡಿದೆ. ಕಳೆದ ಬಾರಿ ಬಿಜೆಪಿ ಸರ್ಕಾರ ಹಾವೇರಿ ರೈತರ ಮೇಲೆ ಗೋಲಿಬಾರ್ ನಡೆಸಿ ರೈತರ ಹತ್ಯೆಗೆ ಕಾರಣವಾಗಿತ್ತು. ಈಗಿನ ಕಾಂಗ್ರೆಸ್ ಸರ್ಕಾರ ಕಬ್ಬು ಬೆಳೆಗಾರರ ಮತ್ತು ರೈತ ಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಹೇಳಿದರು. ಅಲ್ಲಿನ ಜಿಲ್ಲಾಧಿಕಾರಿಗಳನ್ನು ಕೂಡಲೇ ಸೇವೆಯಿಂದ ವಜಾ ಮಾಡಬೇಕು. ಹಾಗೂ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಧರಣಿ ನಿತರ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು. ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಬಸವರಾಜ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement