ಮೆಸ್ಕಾಂ ಕಚೇರಿಗೆ ಬೀಗ ಹಾಕಿ ಧರಣಿ
ಮೂಡಿಗೆರೆ: ವಿದ್ಯುತ್ ಸಮಸ್ಯೆಯಿಂದ ಹುಲ್ಲೆಮನೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಇದನ್ನು ಸರಿಪಡಿಸುವಂತೆ ಒತ್ತಾಯಿಸಿ ಗ್ರಾಮದ ಹುಲ್ಲೆಮನೆ ಚಂದ್ರು, ಸುದರ್ಶನ ಮತ್ತು ರವಿ ಮೆಸ್ಕಾಂ ಕಚೇರಿಗೆ ಆಗಮಿಸಿ ಬಾಗಿಲಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಪ್ರಕರಣ ಮಂಗಳವಾರ ನಡೆದಿದೆ.
ಹುಲ್ಲೇಮನೆ ಗ್ರಾಮದಲ್ಲಿ ಕಳೆದ ಒಂದು ವರ್ಷದಿಂದ ಕುಡಿವ ನೀರಿನ ಸಮಸ್ಯೆಯಿದ್ದು, ಸರಿಪಡಿಸುವಂತೆ ದೂರವಾಣಿ ಮೂಲಕ ಮತ್ತು ನೇರವಾಗಿ ತಿಳಿಸಿದರೂ, ಅಧಿಕಾರಿಗಳು ಸ್ಪಂದಿಸದೇ ಇರುವುರಿಂದ ಕಚೇರಿಗೆ ಬೀಗ ಹಾಕಲಾಗುತ್ತಿದೆ ಎಂದರು. ಅಷ್ಟರಲ್ಲಿ ಪೊಲೀಸರು ಆಗಮಿಸಿ ಯಾವುದೇ ಅನುಮತಿ ರಹಿತ ಪ್ರತಿಭಟನೆ ನಡೆಸಿ ಬೀಗ ಹಾಕುವುದು ತಪ್ಪು. ತಕ್ಷಣವೇ ಬೀಗ ತೆಗೆದು ಸಿಬ್ಬಂದಿಗೆ ಕಾರ್ಯಕ್ಕೆ ಅಡ್ಡಿ ಉಂಟುಮಾಡದಂತೆ ತಿಳಿ ಹೇಳಿದ ಹಿನ್ನೆಲೆಯಲ್ಲಿ ಬೀಗ ತೆರೆದು ಸಿಬ್ಬಂದಿ ಕೆಲಸ ನಿರ್ವಹಿಸಲು ಅನುವು ಮಾಡಿಕೊಟ್ಟರು.