ಇಂದು ದತ್ತಮಾಲಾ ಅಭಿಯಾನ ಶುರು
ಚಿಕ್ಕಮಗಳೂರು: ಸಂಘಪರಿವಾರ ನೇತೃತ್ವದ ದತ್ತಮಾಲಾ ಅಭಿಯಾನ ಹಾಗೂ ದತ್ತಜಯಂತಿ ಕಾರ್ಯಕ್ರಮಕ್ಕೆ ಶನಿವಾರ ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ. ಇಲ್ಲಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ದತ್ತಪೀಠದಲ್ಲಿ ಡಿ.16ರಂದು ದತ್ತ ಜಯಂತಿ ನಡೆಯಲಿದೆ. ಇದರ ಅಂಗವಾಗಿ ರಾಜ್ಯಾದ್ಯಂತ ಸಂಘಪರಿವಾರದ ಕಾರ್ಯಕರ್ತರು ದತ್ತಮಾಲೆಯನ್ನು ಧರಿಸಲಿದ್ದಾರೆ. ಇಲ್ಲಿನ ಶ್ರೀ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ದತ್ತ ಹೋಮ ನಡೆಸಿ, ಬಜರಂಗದಳದ ರಾಜ್ಯ ಸಂಚಾಲಕ ಸೂರ್ಯನಾರಾಯಣ್ ಅವರು ಮಾಲೆಯನ್ನು ಧರಿಸುವ ಮೂಲಕ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸುಮಾರು 15 ಸಾವಿರ ಕಾರ್ಯಕರ್ತರು ದತ್ತಮಾಲೆ ಧರಿಸಲಿದ್ದಾರೆ.