ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಬಿಜೆಪಿಯಲ್ಲಿ ಮಹಿಳೆಯರಿಗೂ ಪ್ರಾಧಾನ್ಯ: ಶಾಸಕ

Rashmi Kasaragodu
Updated On : 9 Dec 2013, 10:58 am

ಚಿಕ್ಕಮಗಳೂರು: ಬಿಜೆಪಿ ಮಹಿಳೆಯರಿಗೂ ಹೆಚ್ಚಿನ ಪ್ರಾತಿನಿಧ್ಯತೆ ನೀಡಿ, ಪುರುಷರಿಗೆ ಸರಿಸಮಾನವಾಗಿ ರಾಜಕೀಯದಲ್ಲಿ ಬೆಳೆಯಲು ಉತ್ತಮ ಅವಕಾಶ ಕಲ್ಪಿಸಿಕೊಡುತ್ತಿದೆ ಎಂದು ಶಾಸಕ ಸಿ.ಟಿ. ರವಿ ಹೇಳಿದರು.
ಪಕ್ಷದ ಜಿಲ್ಲಾ ಕಚೇರಿ ಪಾಂಚಜನ್ಯದಲ್ಲಿ ಶನಿವಾರ ನಡೆದ ಸರಳ ಸಮಾರಂಭದಲ್ಲಿ ತರೀಕೆರೆ ತಾಲೂಕು  ಲಕ್ಕವಳ್ಳಿಯ ಬಿ. ಚಂದ್ರಕಲಾ ಅವರು ಬಿ.ಎಸ್.ಆರ್. ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ನಿಷ್ಠವಂತರಾಗಿ ಕೆಲಸ ಮಾಡಿದಾಗ ಉತ್ತಮ ಅವಕಾಶ ದೊರೆಯುತ್ತದೆ ಎಂದರು.
ಪ್ರೀತಿ, ವಿಶ್ವಾಸ: ಪ್ರಾಮಾಣಿಕವಾಗಿ ಜನಸೇವೆ ಮಾಡುವ ಉದ್ದೇಶದಿಂದ ರಾಜಕಾರಣಕ್ಕೆ ಬಂದು ಸಮಾಜಮುಖಿ ಕೆಲಸಗಳ ಮುಖಾಂತರ ಜನರ ಪ್ರೀತಿ ವಿಶ್ವಾಸ ಪಡೆಯಬೇಕು ಎಂದರು.
ಬಿ. ಚಂದ್ರಕಲಾ ಮಾತನಾಡಿದರು. ಈ ಸಂದರ್ಭದಲ್ಲಿ ತರೀಕೆರೆ ಬಿಜೆಪಿ ತಾಲೂಕು ಅಧ್ಯಕ್ಷ ಕರಕುಚ್ಚಿ ಮೋಹನ್, ಪ್ರಧಾನ ಕಾರ್ಯದರ್ಶಿ  ರವಿಶಂಕರ್, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಗೀತಾ, ಮಹಿಳಾ ಮೋರ್ಚಾ ಅಧ್ಯಕ್ಷೆ ಆಶಾ ಮೋಹನ್, ಪ್ರಧಾನ ಕಾರ್ಯದರ್ಶಿ ಸುಮಾ ಸೋಮಶೇಖರ್ ಮೊದಲಾದರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement