ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನಂಬಿಕೆ, ಪ್ರಾಮಾಣಿಕತೆಯೇ ಯಶಸ್ಸಿನ ಗುಟ್ಟು: ಜೀವರಾಜ್

Mainashree
Updated On : 11 Dec 2013, 11:20 am

ಬಾಳೆಹೊನ್ನೂರು:  ನಂಬಿಕೆ ಮತ್ತು ಪ್ರಾಮಾಣಿಕತೆಯೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಣಾಭಿವೃದ್ಧಿ ಯೋಜನೆ ಯಶಸ್ವಿಯಾಗಲು ಕಾರಣವಾಗಿದೆ ಎಂದು ಶೃಂಗೇರಿ ಶಾಸಕ ಡಿ.ಎನ್. ಜೀವರಾಜ್ ಹೇಳಿದ್ದಾರೆ.
ಸಂಗಮೇಶ್ವರಪೇಟೆಯಲ್ಲಿ ಧರ್ಮಸ್ಥಳ ಗ್ರಾಮಾಣಾಭಿವೃದ್ಧಿ ಯೋಜನೆ ಇತ್ತೀಚೆಗೆ ಆಯೋಜಿಸಿದ್ದ ಖಾಂಡ್ಯ ವಲಯಮಟ್ಟದ ಪ್ರಗತಿ ಸಾಧನಾ ಸಮಾವೇಶ ಹಾಗೂ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಜಿ.ಪಂ. ಮಾಜಿ ಅಧ್ಯಕ್ಷ ಟಿ.ಡಿ. ರಾಜೇಗೌಡ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯು ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜಾರಿಗೊಳಿಸಿ 22 ಜಿಲ್ಲೆಗಳಲ್ಲಿ ಜನಪ್ರಿಯತೆ ಕಂಡಿದೆ. ರಾಷ್ಟ್ರದ ಆರ್ಥಿಕ ಪ್ರಗತಿಗೆ ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರವಾಗಿದ್ದು, ಸ್ವಾವಲಂಬಿ ಬದುಕಿನ ಮೂಲಕ ಆರ್ಥಿಕ ಸಬಲೀಕರಣ ಸಾಧಿಸಲು ಅವಕಾಶ ಮಾಡಿಕೊಟ್ಟ ಮಹಾನ್ ಶಕ್ತಿಯಾಗಿದ್ದಾರೆ ಎಂದರು.
ಭ್ರಷ್ಟಾಚಾರ ತುಂಬಿದ ಈ ದಿನಗಳಲ್ಲಿ ಪ್ರಾಮಾಣಿಕತೆಯಿಂದ ಸಂಸ್ಥೆಯನ್ನು ನಡೆಸುತ್ತಿದ್ದು, ಸಾಲ ಮರುಪಾವತಿಯಲ್ಲಿ ಶೇಕಡಾ ನೂರರಷ್ಟು ಸಾಧನೆ ಸಾಧಿಸಿರುವುದು ಸಾಕ್ಷಿಯಾಗಿದೆ. ಖಾಂಡ್ಯ ಹೋಬಳಿಯಲ್ಲಿ ಹನ್ನೊಂದು ಸಾವಿರ ಜನಸಂಖ್ಯೆಯಿದ್ದು 3077 ಸದಸ್ಯರನ್ನು ಹೊಂದಿರುವುದು ಗಮನಿಸಬೇಕಾದ ಅಂಶವಾಗಿದೆ ಎಂದರು.
ದೇವದಾನ ಗ್ರಾ.ಪಂ. ಅಧ್ಯಕ್ಷೆ ಲಲಿತಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಸ್ಥೆಯ ಜಿಲ್ಲಾ ನಿರ್ದೇಶಕಿ ಗೀತಾ, ಖಾಂಡ್ಯ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಬಿ.ಎನ್. ಸೋಮೇಶ್, ಸಿದ್ದಾಪುರದ ಕಾಫಿ ಬೆಳೆಗಾರ ಎಸ್.ಬಿ. ಲಿಂಗರಾಜು, ಲೀಲಾವತಿ, ಒಕ್ಕೂಟದ ಅಧ್ಯಕ್ಷ ಧರ್ಮಪ್ಪಗೌಡ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement