ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

'ಪ್ರತಿಭಾ ಕಾರಂಜಿಯಿಂದ ವ್ಯಕ್ತಿತ್ವ ವಿಕಸನ'

Mainashree
Updated On : 11 Dec 2013, 11:19 am

ಬಾಳೆಹೊನ್ನೂರು: ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳನ್ನು ಅಳವಡಿಸಿಕೊಂಡಾಗ ವಿದ್ಯಾರ್ಥಿಗಳು ವ್ಯಕ್ತಿತ್ವ ರೂಪಿಸಿಕೊಳ್ಳಬಹುದು ಎಂದು ಬಿ. ಕಣಬೂರು ಗ್ರಾಪಂ ಉಪಾಧ್ಯಕ್ಷೆ ಹೂವಮ್ಮ ಪರಮೇಶ್ವರಗೌಡ ಹೇಳಿದ್ದಾರೆ.
ಸಮೀಪದ ಮುದುಗುಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಬಾಳೆಹೊನ್ನೂರು ಕ್ಲಸ್ಟರ್ ಮಟ್ಟದ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ವಾವಲಂಬಿ ಬದುಕು: ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರಹಾಕಲು ವೇದಿಕೆ ಸಹಕಾರಿಯಾಗಿದ್ದು, ದೇಶೀಯ ಕಲೆ ಕಲೆ ಮತ್ತು ಸಂಸ್ಕೃತಿ ಉಳಿವಿಗೆ ಉತ್ತಮ ವೇದಿಕೆಯಾಗಿದೆ. ಭವಿಷ್ಯದ ದಿನಗಳಲ್ಲಿ ಕಲೆ, ಸಾಹಿತ್ಯ ಇನ್ನಿತರ ಪಠ್ಯೇತರ ಚಟುವಟಿಕೆಯಿಂದ ಸ್ವಾವಲಂಬಿ ಬದುಕು ಗಳಿಸಬಹುದು ಎಂದು ತಿಳಿಸಿದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಡಿ.ಆರ್. ಸೋಮಶೇಖರ್ ಮಾತನಾಡಿ, ಸರ್ಕಾರ ರೂಪಿಸಿದ ಈ ಯೋಜನೆಯಲ್ಲಿ ಎಲ್ಲಾ ಶಾಲೆಗಳು ಕಡ್ಡಾಯವಾಗಿ ಭಾಗವಹಿಸಬೇಕು.
ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸಲು ಸಹಕಾರಿಯಾಗಿವೆ ಎಂದರು.
ನರಸಿಂಹರಾಜಪುರ ತಾ.ಪಂ. ಸದಸ್ಯೆ ಸುಧಾ ಶಾಂತರಾಜು ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಿರಿಯಣ್ಣ ಅಧ್ಯಕ್ಷತೆ ವಹಿಸಿದ್ದರು. ಬಿ. ಕಣಬೂರು ಗ್ರಾ.ಪಂ. ಅಧ್ಯಕ್ಷೆ ಶಾಹೀದಾ ಬಾನು, ಸದಸ್ಯ ಸದಾಶಿವ, ಬಿಆರರ್ಪಿ ತಿಪ್ಪೇಶ್, ಸರ್ಕಾರಿ ಶಿಕ್ಷಕರ ನೌಕರರ ಸಂಘದ ಉಪಾಧ್ಯಕ್ಷ ಲೋಹಿತ್, ಖಜಾಂಚಿ ಮಂಜುನಾಥ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement