ಕ್ಯಾನ್ಸರ್ ಸಾಂಕ್ರಾಮಿಕ ರೋಗವಲ್ಲ: ಡಾ. ರವಿ
ಬಾಳೆಹೊನ್ನೂರು: ಕ್ಯಾನ್ಸರ್ ರೋಗವೂ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗ ಅಲ್ಲ ಎಂದು ಶಿವಮೊಗ್ಗ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ವೈದ್ಯ ಡಾ. ನಾಡಹಳ್ಳಿ ರವಿ ಹೇಳಿದ್ದಾರೆ.
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆ, ಜೇಸಿಐ ಬಾಳೆಹೊನ್ನೂರು ಕ್ಲಾಸಿಕ್ ಹಾಗೂ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ. ಪ್ರೇಮ್ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಆರೋಗ್ಯ ಅಧಿಕಾರಿ ಡಾ. ಸೀಮಾ, ಜೇಸಿಐ ಅಧ್ಯಕ್ಷ ಮಂಜುನಾಥ್ ತುಪ್ಪೂರು, ನಿಯೋಜಿತ ಅಧ್ಯಕ್ಷ ಜಗದೀಶ್, ಉಪಾಧ್ಯಕ್ಷ ದಯಾಕರ್ ಸುವರ್ಣ, ಆರೋಗ್ಯ ಇಲಾಖೆಯ ಭಗವಾನ್ ಉಪಸ್ಥಿತರಿದ್ದರು.