ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಪಠ್ಯೇತರ ಚಟುವಟಿಕೆಗೆ ಶಿಕ್ಷಕರು ಪ್ರೋತ್ಸಾಹಿಸಲಿ

Rashmi Kasaragodu
Updated On : 14 Dec 2013, 10:34 am

ಕ.ಪ್ರ.ವಾರ್ತೆ ಟಿ ಕಡೂರು ಟಿ  ಡಿ.13
ಮಕ್ಕಳಿಗೆ ವಿದ್ಯೆ ಕಲಿಸುವುದು ಎಷ್ಟು ಮುಖ್ಯವೋ ಅವರಲ್ಲಿರುವ ಪ್ರತಿಭೆಯನ್ನು ಹೊರಜಗತ್ತಿಗೆ ಪರಿಚಯಿಸುವಲ್ಲಿಯೂ ಶಿಕ್ಷಕರ ಪಾತ್ರ ಬಹು ಮುಖ್ಯವಾಗಿದ್ದು ಎಂದು ತಂಗಲಿ ತಾಲೂಕು ಪಂಚಾಯ್ತಿ ಸದಸ್ಯ ಆರ್.ಶಿವಕುಮಾರ್ ಹೇಳಿದರು.
ತಾಲೂಕು ಕಡೂರಹಳ್ಳಿ ಕ್ಲಸ್ಟರ್ನ ಶ್ರೀರಾಂಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಗುಣಮಟ್ಟದ ಶಿಕ್ಷಣ: ಶಿಕ್ಷಣ ಕ್ಷೇತ್ರದಲ್ಲಿನ ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಶಿಕ್ಷಕರ ಪಾತ್ರ ಮುಖ್ಯ. ಇಂದಿನ ದಿನಗಳಲ್ಲಿ ಸರ್ಕಾರಗಳು ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ. ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಹೆಚ್ಚು ಜವಬ್ದಾರಿ ವಹಿಸಿ ಮಕ್ಕಳ ಪ್ರತಿಭೆ ಗುರುತಿಸಿ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲೂ ಮಕ್ಕಳು ಮುಂದೆ ಬರುವಂತೆ ಪ್ರೋತ್ಸಾಹಿಸಬೇಕು. ಅದಕ್ಕೆ ಪೋಷಕರೂ ಸಹಕಾರ ನೀಡಬೇಕು ಎಂದರು.
ಪ್ರತಿಭಾ ಕಾರಂಜಿ ಉಧ್ಘಾಟಿಸಿದ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್ ಮಾತನಾಡಿ, ಮಕ್ಕಳ ಪ್ರತಿಭಾ ವಿಕಾಸಕ್ಕೆ ಶಿಕ್ಷಕರು ಮತ್ತು ಪೋಷಕರ ಪ್ರೋತ್ಸಾಹ ಅತಿ ಮುಖ್ಯ. ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಸರ್ಕಾರ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪ್ರೋತ್ಸಾಹ ನೀಡುತ್ತಿದೆ ಎಂದರು.
ಕಲಿಕೋತ್ಸವ: ಶಿಕ್ಷಕರ ಸಂಘದ ನಿರ್ದೇಶಕ ಬಿ.ಜಿ. ಆನಂದಮೂರ್ತಿ ಮಾತನಾಡಿ, ಸರ್ಕಾರವು ಪ್ರತಿದಿನ ರೂಪಿಸುತ್ತಿರುವ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಹೊಸ ಯೋಜನೆ ಜಾರಿ ನಡುವೆಯ ಕೂಡ ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ. ಇದೀಗ ಮತ್ತೆ ಸರ್ಕಾರ ಕಲಿಕೋತ್ಸವ ಕಾರ್ಯಕ್ರಮ ಜಾರಿಗೆ ತರುತ್ತಿದೆ.  ಶಿಕ್ಷಕರು ಇವುಗಳ ನಡುವೆಯ ಜೊತೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಕಡೆಯೂ ಕೂಡ ಗಮನಹರಿಸುತ್ತಿದ್ದಾರೆ ಎಂದರು.   
ಕಡೂರಹಳ್ಳಿ ಗ್ರಾ .ಪ. ಸದಸ್ಯ ಪ್ರಶಾಂತ್ ಮಾತನಾಡಿ, ಮಕ್ಕಳ ವಿದ್ಯೆಗೆ ಒತ್ತು ನೀಡುವ ಜೊತೆ ಕ್ರೀಡೆಗಳಿಗೂ ಮತ್ತು ಮಾನಸಿಕ ಹಾಗು ಭೌದ್ದಿಕ ಬೆಳವಣಿಗೆಗೆ ಸಹಕಾರಿಯಾಗುವಂತಹ ಕಾರ್ಯಕ್ರಮಗಳ ಅಗತ್ಯತೆ ಹೆಚ್ಚಿದೆ ಎಂದರು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ರೋಜಾಬಾಯಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಭೈರೇಗೌಡ, ಶಾಲೆಯ ಮುಖ್ಯ ಶಿಕ್ಷಕ ಹೆಚ್.ಎಂ. ಉಮಾಪತಿ, ಜೆಡಿಎಸ್ ಮುಖಂಡ ಡಿ. ಮಹೇಶ್, ಎಸ್. ಸತೀಶ್ ,ಶಿಕ್ಷಕರ ಸಂಘದ ಪದಾಧಿಕಾರಿಗಳಾದ ವೈ.ಎಂ. ತಿಪ್ಪೇಶ್, ಪುಟ್ಟಪ್ಪ, ಅರೇಹಳ್ಳಿ ಮಲ್ಲಿಕಾರ್ಜುನ್, ಪ್ರಕಾಶ್, ಗ್ರಾ.ಪಂ ಅಧ್ಯಕ್ಷ ಮೂಡಲಗಿರಿಯಪ್ಪ, ಜಯಣ್ಣ ನಾಗರಾಜ್, ಮಕ್ಕಳು ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement