ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಶಿಮುಲ್ ನೇಮಕಾತಿ ತಡೆಗೆ ಆಗ್ರಹ

Rashmi Kasaragodu
Updated On : 14 Dec 2013, 10:34 am

ಶಿವಮೊಗ್ಗ: ಶಿವಮೊಗ್ಗ ಹಾಲು ಒಕ್ಕೂಟದ ಮೂಲಕ ನಡೆಯುತ್ತಿರುವ ನೇಮಕಾತಿ ಸಂದರ್ಶನ ಪ್ರಕ್ರಿಯೆಯನ್ನು ತಡೆಹಿಡಿದು, ಪಾರದರ್ಶಕತೆಯ ಮೂಲಕ ನೇಮಕಾತಿ ನಡೆಸುವಂತೆ ಒತ್ತಾಯಿಸಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ಜಿಲ್ಲಾಡಳಿತಕ್ಕೆ ಮನವಿ ಅರ್ಪಿಸಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಪಾರದರ್ಶಕವಾಗಿ ನೇಮಕಾತಿ ನಡೆಯಬೇಕೆಂದು ಆಗ್ರಹಿಸಿ ಘೋಷಣೆ ಕೂಗಿದರು. ಕರ್ನಾಟಕ ಹಾಲು ಒಕ್ಕೂಟದ ಅಧೀನಕ್ಕೊಳಪಟ್ಟ ಶಿಮುಲ್ನಲ್ಲಿ ಖಾಲಿ ಇರುವ 103 ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಕರೆಯಲಾಗಿತ್ತು. ಇದಕ್ಕೆ ಸುಮಾರು 7000ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈಗಾಗಲೇ ಶಿಮುಲ್ ಆಡಳಿತ ಮಂಡಳಿ ಈ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಆಯಾ ಹುದ್ದೆಗೆ ನಿಗದಿತ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳನ್ನು ಆಧರಿಸಿ ಜೇಷ್ಠತಾ ಪಟ್ಟಿ (ಮೆರಿಟ್ ಲಿಸ್ಟ್ ಸಿದ್ಧಪಡಿಸಿರುವುದಾಗಿ ತಿಳಿದುಬಂದಿದೆ. ಹೀಗೆ ಸಿದ್ಧಪಡಿಸಿದ ಮೆರಿಟ್ ಲಿಸ್ಟ್ ಆಧರಿಸಿ ಪ್ರತಿ ಒಂದು ಹುದ್ದೆಗೆ ತಲಾ 1.5ರ ಅನುಪಾತದಲ್ಲಿ ಸಂದರ್ಶನಕ್ಕೆ ಹಾಜರಾಗಲು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ಆದರೆ, ಈ ಪ್ರಕ್ರಿಯೆಯಲ್ಲಿ ಅವ್ಯವಹಾರ- ಅಕ್ರಮಗಳು ನಡೆಯುತ್ತಿರುವ ಬಗ್ಗೆ ನೊಂದ ಅಭ್ಯರ್ಥಿಗಳು ಹಾಗೂ ಪೋಷಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement