ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಟನ್ ತಾಳೆಗೆ 8500 ಬೆಂಬಲ ಬೆಲೆ

Mainashree
Updated On : 15 Dec 2013, 10:53 am

ಕ.ಪ್ರ.ವಾರ್ತೆ, ನರಸಿಂಹರಾಜಪುರ, ಡಿ.14
ಒಂದು ಟನ್ ತಾಳೆ ಹಣ್ಣಿಗೆ 8.500 ಬೆಂಬಲ ಬೆಲೆ ನಿಗದಿ ಮಾಡಿ ಸರ್ಕಾರ ಆದೇಶ ನೀಡಿದೆ ಎಂದು ಜಿಲ್ಲಾ ತಾಳೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಕೆ.ಜಾನಕೀರಾಂ ತಿಳಿಸಿದ್ದಾರೆ.
ರಾಜ್ಯ ತಾಳೆ ಬೆಳೆಗಾರರ ಸಂಘದ ಪದಾಧಿಕಾರಿಗಳು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರ ಮುಖಂಡತ್ವದಲ್ಲಿ ಮುಖ್ಯಮಂತ್ರಿಗಳು ಮತ್ತು ರಾಜ್ಯ ತೋಟಗಾರಿಕೆ ಸಚಿವರನ್ನು ಭೇಟಿ ಮಾಡಿ ಚರ್ಚಿಸಲಾಗಿತ್ತು. ಇದರ ಫಲಶ್ರುತಿಯಾಗಿ ಮುಖ್ಯಮಂತ್ರಿಗಳು ಸಂಪುಟ ಸಭೆಯಲ್ಲಿ ತಾಳೆ ಬೆಳೆಗಾರರ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ಹಿಂದೆ 1 ಟನ್ ತಾಳೆ ಬೆಳೆಗೆ 7000 ಇದ್ದಿದ್ದು ಅದನ್ನು 8.500ಕ್ಕೆ ಏರಿಸಲು ಸರ್ಕಾರವು ತೀರ್ಮಾನಿಸಿ ಆದೇಶ ನೀಡಿದೆ. ಮುಂದಿನ ದಿನಗಳಲ್ಲೂ ತಾಳೆ ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ತಾಳೆ ಬೆಳೆಗಾರ ಸಂಘ ಸದಾ ಸಿದ್ದವಿದೆ ಎಂದು ಬಿ.ಕೆ.ಜಾನಕಿರಾಂ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement