ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿದ್ಯಾರ್ಥಿ ಭವಿಷ್ಯಕ್ಕೆ ಪ್ರತಿಭಾ ಕಾರಂಜಿ ಪೂರಕ

Mainashree
Updated On : 15 Dec 2013, 10:54 am

ನರಸಿಂಹರಾಜಪುರ:  ಮಕ್ಕಳ ದೈಹಿಕ, ಮಾನಸಿಕ ಹಾಗೂ ಶೈಕ್ಷಣಿಕ ಸಾಮರ್ಥ್ಯ ಬೆಳೆಯಲು ಪ್ರತಿಭಾ ಕಾರಂಜಿ ಸಹಾಯಕವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್. ರಮೇಶ್ ತಿಳಿಸಿದರು.
ಇಲ್ಲಿನ ಬಸ್ತಿಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ನಡೆದ ತಾಲೂಕುಮಟ್ಟದ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮೆಣಸೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಶ್ರೀನಾಥ್ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಸ್ತಿಮಠ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ ಪಿ. ದೊಡ್ಡಮನೆ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಮೆಣಸೂರು ಗ್ರಾಪಂ ಸದಸ್ಯ ಕೆ.ಅನಿಲ್, ಬಾಳೆ ಗ್ರಾಮ ಪಂಚಾಯ್ತಿ ಸದಸ್ಯ ಡಿ.ಸಜಿ, ತಾಪಂ ಮಾಜಿ ಉಪಾಧ್ಯಕ್ಷ ಶಿವದಾಸ್, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ಮಯಾಧಿಕಾರಿ ಡಿ.ರಾಜಪ್ಪ, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ.ಗುರುಶಾಂತಪ್ಪ, ತಾಲೂಕು ದೈಹಿಕ ಪರಿವೀಕ್ಷಕ ಕೆ.ಮೌನೇಶ್ವರಾಚಾರ್, ತಾಲೂಕು ದೈಹಿಕ ಶಿಕ್ಷಕರ ಸಂಘದ ಅದ್ಯಕ್ಷ ಎಂ.ಪ್ರಕಾಶ್, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಡಿ.ಬೋಗೇಶ್, ಜಿ.ಈಶ, ಬಸ್ತಿಮಠದ ಶಾಲೆಯ ಮುಖ್ಯ ಶಿಕ್ಷಕ ಎಂ.ಸಿ. ವೀರಯ್ಯ, ದಾನಿಗಳಾದ ಮಸ್ತಾದ್ ಆಲಿ ಉಪಸ್ಥಿತರಿದ್ದರು.
ಮೇ ತಿಂಗಳಲ್ಲಿ ನಿವೃತ್ತಿ ಹೊಂದಲಿರುವ ಬಸ್ತಿಮಠದ ಶಾಲಾ ಮುಖ್ಯೋಪಾಧ್ಯಾಯ ಎಂ.ಸಿ.ವೀರಯ್ಯ, ಬಸ್ತಿಮಠ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ 7ನೇ ತರಗತಿಯ ಕೃಷ್ಣ ಹಾಗೂ ದಾನಿಗಳಾದ ಮಸ್ತಾನ್ ಆಲಿ ಅವರನ್ನು ಸನ್ಮಾನಿಸಲಾಯಿತು.
ಎಂ.ಸಿ.ವೀರಯ್ಯ ಸ್ವಾಗತಿಸಿ, ಪೆನ್ನಿನಾ ಕಾರ್ಯಕ್ರಮ ನಿರ್ವಹಿಸಿದರು. ರಂಗಪ್ಪ ವಂದಿಸಿದರು. ವಿಜೇತರಾದ ಮಕ್ಕಳು ತಾಲೂಕುಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement