ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅಡಕೆ: ಸುಪ್ರೀಂನಲ್ಲಿ ರಾಜ್ಯ ವಾದ ಮಂಡಿಸಲಿ

Lingaraj Badiger
Updated On : 17 Dec 2013, 10:56 am

ನರಸಿಂಹರಾಜಪುರ: ಅಡಕೆ ನಿಷೇಧ ಮಾಡಬೇಕು ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ವರದಿಯ ವಿಚಾರಣೆಯು ಜ. 6 ರಂದು ನ್ಯಾಯಾಲಯದ ಮುಂದೆ ಬರಲಿದ್ದು, ರಾಜ್ಯ ಸರ್ಕಾರವು ತಕ್ಷಣ ಸುಪ್ರೀಂ ಕೋರ್ಟಿಗೆ ರಾಜ್ಯವನ್ನು ಇಂಪ್ಲೀಡಿಂಗ್ ಮಾಡಿ ಎಂದು ಅರ್ಜಿ ಸಲ್ಲಿಸಬೇಕು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ ಒತ್ತಾಯಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಡಕೆ ನಿಷೇಧದ ವಿಚಾರ ಸುಪ್ರೀಂಕೋರ್ಟಿನ ಮುಂದಿರುವುದರಿಂದ ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಅಡಕೆ ನಿಷೇಧದ ಬಗ್ಗೆ ಯಾವ ಶಾಸಕರು ಪ್ರಸ್ತಾಪ ಮಾಡಲಿಲ್ಲ. ಅಗತ್ಯ ಬಿದ್ದರೆ ಸರ್ಕಾರವು ವಿಶೇಷ ಅಧಿವೇಶನ ಕರೆಯಬೇಕು ಎಂದು ಎಚ್.ಟಿ. ರಾಜೇಂದ್ರ ಸಲಹೆ ನೀಡಿದರು.
ಹೋರಾಟ ಅನಿವಾರ್ಯ: ಕೇಂದ್ರ ಸರ್ಕಾರವು ಅಡಕೆ ಬೆಳೆಗಾರರ ರಕ್ಷಣೆಗೆ ಬರಬೇಕು. ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅಡಕೆ ನಿಷೇಧದ ವಿಚಾರವಾಗಿ ವಾದ ಮಂಡಿಸಲು ಅಡ್ವೋಕೇಟ್ ಜನರಲ್ ಅವರನ್ನು ನೇಮಕ ಮಾಡಬೇಕು ಎಂದು ಸಲಹೆ ನೀಡಿದರು.
ಒಂದು ವೇಳೆ ಸುಪ್ರೀಂಕೋರ್ಟ್‌ನಲ್ಲಿ ಅಡಕೆ ಬೆಳೆಗಾರರ ವಿರುದ್ಧ ತೀರ್ಪು ಬಂದರೆ ಚುನಾಯಿತ ಪ್ರತಿನಿಧಿಗಳನ್ನು ಬೆಳೆಗಾರ ಕ್ಷಮಿಸುವುದಿಲ್ಲ. ಇದಕ್ಕೆ ಕಾಂಗ್ರೆಸ್, ಬಿಜೆಪಿಗಳೇ ಹೊಣೆಯಾಗಲಿದೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಬೀದಿಗಿಳಿದು ಬೆಳೆಗಾರರ ಪರವಾಗಿ ಹೋರಾಟ ಮಾಡಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ತಾಪಂ ಸದಸ್ಯ ಎಸ್.ಎಸ್. ಶಾಂತಕುಮಾರ್, ತಾಲೂಕು ಜೆಡಿಎಸ್ ಅಧ್ಯಕ್ಷ ಹೊಸೂರು ಸುರೇಶ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಸತ್ಯನಾರಾಯಣ ಶ್ರೇಷ್ಠಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement