ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಜಿಲ್ಲಾಮಟ್ಟಕ್ಕೆ ಆಯ್ಕೆ

Lingaraj Badiger
Updated On : 18 Dec 2013, 10:58 am

ನರಸಿಂಹರಾಜಪುರ: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಟ್ಟಣದ ಡಿಸಿಎಂಸಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಜಯಗಳಿಸಿದ್ದಾರೆ.
7ನೇ ತರಗತಿ ವಿದ್ಯಾರ್ಥಿನಿ ಜೋಮಿ ಅಭಿನಯ ಗೀತೆಯಲ್ಲಿ ಪ್ರಥಮ, 4ನೇ ತರಗತಿ ವಿದ್ಯಾರ್ಥಿ ಕೆನತ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ, 4ನೇ ತರಗತಿ ಹೃಷಿಕೇಶ್ ಚಿತ್ರಕಲೆ ಸ್ಪರ್ಧೆ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಡಿಸಿಎಂಸಿ ಶಾಲೆಯ ಪ್ರಾಂಶುಪಾಲೆ ಪದ್ಮ ರಮೇಶ್ ತಿಳಿಸಿದ್ದಾರೆ. 3ನೇ ತರಗತಿಯ ಕೆ.ಜಿ. ಆಕಾಂಕ್ಷ ಲಘು ಸಂಗೀತದಲ್ಲಿ ತೃತೀಯ, 6ನೇ ತರಗತಿಯ ಶ್ರೇಯ ಮತ್ತು ತಂಡದವರು ದೇಶಭಕ್ತಿ ಗೀತೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಅಭಿನಂದಿಸಿದೆ.
ನಗರಸಭೆ ಬಜೆಟ್ ಪೂರ್ವಭಾವಿ ಸಭೆ
ಚಿಕ್ಕಮಗಳೂರು: ನಗರಸಭೆಯ 2014- 15ನೇ ಸಾಲಿನಲ್ಲಿ ನಗರಸಭೆಯಿಂದ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಸಾರ್ವಜನಿಕವಾಗಿ ಅಭಿಪ್ರಾಯ ಸಂಗ್ರಹಿಸಿ ಆಯವ್ಯಯ ತಯಾರಿಸುವ ಸಂಬಂಧ ಪ್ರಥಮ ಹಂತದ ಬಜೆಟ್ ಪೂರ್ವಭಾವಿ ಸಭೆಯನ್ನು ಡಿ. 19 ರಂದು ಬೆಳಗ್ಗೆ 10.30ಕ್ಕೆ ನಗರಸಭೆ ಆವರಣದಲ್ಲಿ ನಗರಸಭೆ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಬಿ.ಎಸ್. ಶೇಖರಪ್ಪ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. ಸಾರ್ವಜನಿಕರು ಸಭೆಗೆ ಆಗಮಿಸಿ ಸಲಹೆ, ಸೂಚನೆ ನಿಡಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement