ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಸಿ.ಟಿ. ರವಿ ಹೇಳಿಕೆ ಖಂಡಿಸಿ ಡಿಸಿಗೆ ಮನವಿ

Lingaraj Badiger
Updated On : 18 Dec 2013, 10:58 am

ಚಿಕ್ಕಮಗಳೂರು: ದತ್ತ ಜಯಂತಿ ಸಂದರ್ಭದಲ್ಲಿ ಸಂಘ ಪರಿವಾರದ ಕಾರ್ಯಕರ್ತರು ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ಶಾಸಕ ಸಿ.ಟಿ. ರವಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಅಂಜುಮನ್ ಇಸ್ಲಾಮಿಯ ಸಂಸ್ಥೆಯ ನೇತೃತ್ವದಲ್ಲಿ ಮುಸ್ಲಿಂ ಮುಖಂಡರು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಬಾಬಾಬುಡನ್ ಗಿರಿ ದರ್ಗಾಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ತಲತಲಾಂತರದಿಂದಲೂ ಮುಸಲ್ಮಾನರ ಶ್ರದ್ಧಾ ಕೇಂದ್ರವಾಗಿದೆ.
ಇಲ್ಲಿನ ನಾಮ ಫಲಕದಲ್ಲಿದ್ದ ಉರ್ದು ಅಕ್ಷರಗಳನ್ನು ಮುಚ್ಚಿರುವುದು ನ್ಯಾಯಾಲಯದ ಆದೇಶ ಉಲ್ಲಂಘನೆ ಯಾಗಿರುವುದಲ್ಲದೆ ಅಲ್ಪಸಂಖ್ಯಾತರ ಭಾವನೆಗೆ ಧಕ್ಕೆ ತರುವಂತಹದ್ದಾಗಿದೆ. ಈ ಕೃತ್ಯವನ್ನು ಖಂಡಿಸುವುದಲ್ಲದೆ ಮುಂದೆ ಇಂತಹ ಪ್ರಸಂಗಗಳು ನಡೆಯದಂತೆ ಎಚ್ಚರವಹಿಸಬೇಕೆಂದು ಮನವಿ ಮಾಡಿದ್ದಾರೆ. ಶಾಸಕ ಸಿ.ಟಿ. ರವಿಯವರು ದತ್ತಪೀಠ ಹಿಂದೂಗಳಿಗೆ ಸೇರಿದ್ದು ಇದನ್ನು ಯಾವುದೇ ಕಾರಣಕ್ಕೂ ಅನ್ಯ ಧರ್ಮೀಯರಿಗೆ ಬಿಟ್ಟು ಕೊಡಲು ಸಾಧ್ಯವಿಲ್ಲ ಎಂದು ಬಾಬಾಬುಡನ್ ಗಿರಿ ಆವರಣದಲ್ಲಿ ಬಹಿರಂಗವಾಗಿ ಧಾರ್ಮಿಕ ಸಭೆಯಲ್ಲಿ ಹೇಳಿದ್ದಾರೆ.
ಶಾಸಕರಾದವರು ಎಲ್ಲ ಧರ್ಮೀಯರನ್ನು ಸಮಾನವಾಗಿ ಕಾಣಬೇಕಿತ್ತು. ಅದನ್ನು ಬಿಟ್ಟು ಹಿಂದೂ ಧರ್ಮೀಯರ ಏಜೆಂಟರಂತೆ ವರ್ತಿಸುತ್ತಿರುವುದು ಸಮಂಜಸವಲ್ಲ. ಈ ಸಂಬಂಧ ಶಾಸಕ ಸಿ.ಟಿ. ರವಿ ಮತ್ತು ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮುಖಂಡರಾದ ಮಹಮದ್ ಅಕ್ಬರ್, ಅತೀಖ್ ಕಸರ್, ಅಂಜುಮಾನ್ ಇಸ್ಲಾಮಿಯ ಸಂಸ್ಥೆ ಅಧ್ಯಕ್ಷ ನಜೀರ್ ಅಹಮದ್, ಉಪಾಧ್ಯಕ್ಷ ಜಮೀರ್ ಅಹಮದ್, ಎ.ಆರ್. ಶರೀಫ್, ಹನೀಫ್, ನಿಸಾರ್ ಅಹಮದ್, ಮಿರ್ಜಾ ಈ ಸಂದರ್ಭದಲ್ಲಿ ಹಾಜರಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement