ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಖಾತ್ರಿ ಸದುಪಯೋಗವಾಗಲಿ: ಗ್ರಾಪಂ ಅಧ್ಯಕ್ಷ ದಿನೇಶರಾಜ್

Lingaraj Badiger
Updated On : 19 Dec 2013, 11:29 am

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಮಹಾತ್ಮಾಕಾಂಕ್ಷಿ ಯೋಜನೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸೇರ್ಪಡೆಗೊಳ್ಳುವ ಮೂಲಕ ಗ್ರಾಮೀಣ ಜನತೆ ನಿರುದ್ಯೋಗ ಸಮಸ್ಯೆಯಿಂದ ಮುಕ್ತರಾಗಬೇಕು ಎಂದು ತೇಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್‌ರಾಜ್ ಅರಸ್ ಹೇಳಿದ್ದಾರೆ.
ಗ್ರಾಪಂ ಕಚೇರಿಯಲ್ಲಿ ಮಂಗಳವಾರ ನಡೆದ ಯೋಜನೆಯ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಕಾಯಕ ಬಂಧುಗಳಿಗೆ ಗುರುತಿನ ಚೀಟಿ ವಿತರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವುದರ ಜೊತೆಗೆ ಗ್ರಾಮೀಣರನ್ನು ಆರ್ಥಿಕವಾಗಿ ಸದೃಢಗೊಳಿಸುವ ಮಹಾತ್ಮಾಕಾಂಕ್ಷೆ ಯೋಜನೆ ಉದ್ಯೋಗ ಖಾತ್ರಿ. ರೈತರು ಮತ್ತು ಕೃಷಿ ಕಾರ್ಮಿಕರು ಇದರ ಲಾಭ ಪಡೆಯಬೇಕು ಎಂದರು.
ಕಾರ್ಯಾಗಾರ ಉದ್ಘಾಟಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಿ. ಧನರಾಜ್, ಉದ್ಯೋಗ ಖಾತ್ರಿ ಯೋಜನೆ ಕುರಿತು ಗ್ರಾಮೀಣ ಜನತೆಗೆ ವಿವರ ನೀಡಿದರು.
ಡಿಸೆಂಬರ್ ತಿಂಗಳ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮಕ್ಕೆ ಇದೇ ವೇಳೆ ಚಾಲನೆ ನೀಡಲಾಯಿತು. ತಾಪಂ ಸಹಾಯಕ ನಿರ್ದೇಶಕ ಗಂಗಾಧರಪ್ಪ, ಗ್ರಾಪಂ ಉಪಾಧ್ಯಕ್ಷೆ ಹೇಮಾ, ಅಭಿವೃದ್ಧಿ ಅಧಿಕಾರಿ ಕೆ. ಶೇಖ್ ಅಹ್ಮದ್, ಐಇಸಿ ಸಂಯೋಜಕ ಲೋಹಿತ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement