ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮಹಿಳಾ ಸ್ವಸಹಾಯ ಗುಂಪಿನಿಂದ ಆರ್ಥಿಕ ಸಬಲತೆ: ಸುಜಾತಾ

Lingaraj Badiger
Updated On : 19 Dec 2013, 11:23 am

ನರಸಿಂಹರಾಜಪುರ: ಮಹಿಳಾ- ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ, ಗೊಂಚಲು ಗುಂಪಿನ ಸದಸ್ಯರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವು ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆಯಿತು.  ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಸುಜಾತಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ತಾಪಂ ಅಧ್ಯಕ್ಷ ಜೆ.ಜಿ. ನಾಗರಾಜ್ ಮಾತನಾಡಿ, ದೇಶದಲ್ಲಿ ಎಲ್ಲಾ ರಂಗದಲ್ಲೂ ಶೇ.33ರಷ್ಚು ಮೀಸಲಾತಿಯನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂಬ ಕಾನೂನು ಇದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಶೇ.33ಕ್ಕಿಂತ ಜಾಸ್ತಿ ಮಹಿಳೆಯರು ಎಲ್ಲಾ ರಂಗದಲ್ಲೂ ಸಕ್ರಿಯವಾಗಿದ್ದು ಯಶಸ್ವಿಯಾಗಿದ್ದಾರೆ ಎಂದರು. ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ಜ್ಯೋತಿಲಕ್ಷ್ಮಿ ಪ್ರಾಸ್ತಾವಿಕವಾಗಿ ಮಾತನಾಡಿದರು.  ತಾಪಂ ಇಒ ಜಗದೀಶ್, ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿಯ ಅಧ್ಯಕ್ಷೆ ಮಾಲತಿ, ಆರೋಗ್ಯ ಇಲಾಖೆಯ ಲಲಿತ, ಕೆಎಂಎಫ್‌ನ ಮಾರುಕಟ್ಟೆ ಅಧಿಕಾರಿ ರಘು, ರಾಜೇಶ್ ಹಾಜರಿದ್ದರು. ಶಶಿಕಲಾ ಪ್ರಾರ್ಥಿಸಿ, ರತ್ನ ನಿರೂಪಿಸಿ, ಜ್ಯೋತಿಲಕ್ಷ್ಮಿ ವಂದಿಸಿದರು. ಸ್ತ್ರೀಶಸ್ತಿ ಸಂಘದ ಸದಸ್ಯರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement