23ರಂದು ಚಿಕ್ಕಮಗಳೂರಿಗೆ ಜೋಷಿ
ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಡಿ.23ರಂದು ಚಿಕ್ಕಮಗಳೂರಿಗೆ ಆಗಮಿಸಲಿದ್ದಾರೆ.
ಅಂದು ಪಕ್ಷದ ಕಚೇರಿಯಲ್ಲಿ 48 ಶಕ್ತಿ ಕೇಂದ್ರ ಹಾಗೂ 9 ಮಂಡಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪಕ್ಷದ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಒಳಗೊಂಡ ಶಕ್ತಿ ಕೇಂದ್ರಗಳ ಕಾರ್ಯಾಗಾರ ನಡೆಯಲಿದೆ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.
ಸಭೆಯಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜೀ, ಉಪಾಧ್ಯಕ್ಷ ಎಂ.ಬಿ. ಭಾನುಪ್ರಕಾಶ್, ಶಾಸಕರಾದ ಸಿ.ಟಿ. ರವಿ, ಡಿ.ಎನ್. ಜೀವರಾಜ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಆಡಳಿತದ ವೈಫಲ್ಯತೆ, ಭ್ರಷ್ಟಾಚಾರ ಹಾಗೂ ಹಿಂದಿನ ಬಿಜೆಪಿ ಸರ್ಕಾರದ ಸಾಧನೆಯನ್ನು ಶಕ್ತಿ ಕೇಂದ್ರದ ಕಾರ್ಯಕರ್ತರಿಗೆ ತಿಳಿಸಿಕೊಡುವ ಉದ್ದೇಶದಿಂದ ಈ ಕಾರ್ಯಗಾರ ಏರ್ಪಡಿಸಲಾಗಿದೆ ಎಂದರು.
ಡಿ.21ರಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ 237 ಬೂತ್ಗಳ ಏಜೆಂಟರ ಪ್ರಶಿಕ್ಷಣಾ ವರ್ಗ ನಡೆಯಲಿದೆ ಎಂದು ಹೇಳಿದರು.