ಉಚಿತ ಪರೀಕ್ಷಾ ತರಬೇತಿ ಶಿಬಿರ
ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ಮೇ 2014 ರಂದು ನಡೆಸಲಿರುವ ಐಎಎಸ್, ಐಪಿಎಸ್ ಪೂರ್ವಭಾವಿ ಪರೀಕ್ಷೆಗೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ಮುಂದೆ ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಡಿ.26 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿವಿ, ಮುಕ್ತ ಗಂಗೋತ್ರಿ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತರಬೇತಿ ಕೇಂದ್ರದ ಸಂಯೋಜಕರಾದ ಜೈನಹಳ್ಳಿ ಸತ್ಯನಾರಾಯಣಗೌಡ ಅವರನ್ನು ಅಥವಾ ದೂರವಾಣಿ ಸಂಖ್ಯೆ 0821-2515944 ನ್ನು ಸಂಪರ್ಕಿಸಬಹುದಾಗಿದೆ ಎಂದು ಕುಲಸಚಿವರಾದ ಪ್ರೊ. ಪಿ.ಎಸ್. ನಾಯಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.