ಅಕ್ಷರ ದಾಸೋಹ ತರಬೇತಿ: ಚಂದ್ರಮ್ಮ ಜಿಲ್ಲಾ ಪ್ರತಿನಿಧಿ
ತರೀಕೆರೆ: ಕರ್ನಾಟಕ ಸರ್ಕಾರದ ಅಕ್ಷರ ದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತೆಯರಿಗೆ ಜಿಲ್ಲೆಯಿಂದ ತರಬೇತಿ ನೀಡುವ ಕಾರ್ಯಾಗಾರಕ್ಕೆ ಹೊಟೇಲ್ ಮ್ಯಾನೇಜ್‌ಮೆಂಟ್ ಸಂಸ್ಥೆ ಎಸ್.ಜೆ. ಪಾಲಿಟೆಕ್ನಿಕ್ ಕ್ಯಾಂಪಸ್ ಬೆಂಗಳೂರು ಇಲ್ಲಿ ಡಿ.23 ರಿಂದ 2014ರ ಜ.1ರವರೆಗೆ ನಡೆಯಲಿರುವ ತರಬೇತಿ ಕಾರ್ಯಾಗಾರದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಪ್ರತಿನಿಧಿಯಾಗಿ ತರೀಕೆರೆ ತಾಲೂಕು ಬಿಸಿಯೂಟ ಫೆಡರೇಷನ್ ಅಧ್ಯಕ್ಷ ಮತ್ತು ನಗರದ ನಾಗಪ್ಪ ಕಾಲೋನಿಯ ಸರ್ಕಾರಿ ಹಿ.ಪ್ರಾ. ಶಾಲೆಯಲ್ಲಿ ಮುಖ್ಯ ಅಡಿಗೆಯವರಾಗಿ ಕಾರ್ಯನಿರ್ವಹಿಸುತ್ತಿರುವ ಚಂದ್ರಮ್ಮ ಆಯ್ಕೆಯಾಗಿದ್ದಾರೆ ಎಂದು ಸಹಾಯಕ ನಿರ್ದೇಶಕ ಚೌಡಯ್ಯ ಅವರು ತಿಳಿಸಿದ್ದಾರೆ.
ಕಾರ್ಯಾಗಾರದ ನಂತರ ಜಿಲ್ಲೆಯ ಬಿಸಿಯೂಟ ಕಾರ್ಯಕರ್ತೆಯರ ಸಮನ್ವಯ ಅಧಿಕಾರಿಯನ್ನಾಗಿ ನೇಮಕವಾಗಲಿದ್ದಾರೆ. ಜಿಲ್ಲೆಯಿಂದ ಆಯ್ಕೆಯಾಗಿರುವ ಚಂದ್ರಮ್ಮ ಅವರಿಗೆ ತಾಲೂಕು ಬಿಸಿಯೂಟ ಕಾರ್ಯಕರ್ತೆಯರ ಫೆಡರೇಷನ್ ವತಿಯಿಂದ ಅಭಿನಂದನೆ ಸಲ್ಲಿಸಲಾಗುವುದು ಎಂದು ಎಐಟಿಯುಸಿ ಮುಖಂಡರಾದ ಟಿ.ಜಿ.ಶಿವಕುಮಾರ್ ತಿಳಿಸಿದ್ದಾರೆ.