'ಜ್ಞಾನಾಭಿವೃದ್ಧಿಗೆ ಪ್ರತಿಭಾ ಕಾರಂಜಿ ಸಹಕಾರಿ'
ನರಸಿಂಹರಾಜಪುರ: ಕಲಿಕೋತ್ಸವ ಕಾರ್ಯಕ್ರಮದಿಂದ ಮಕ್ಕಳಿಗೆ ತಮ್ಮ ಜ್ಞಾನ ಹೆಚ್ಚಿಸಿಕೊಳ್ಳಲು ಪ್ರತಿಭಾ ಕಾರಂಜಿ ಹೆಚ್ಚಿಸಿಕೊಳ್ಳಲು ಅನುಕೂಲವಾಗಿದೆ ಎಂದು ತಾಲೂಕು ಪಂಚಾಯ್ತಿ ಸದಸ್ಯ ಎಸ್.ಎಸ್. ಶಾಂತಕುಮಾರ್ ತಿಳಿಸಿದರು.
ಅವರು ಶನಿವಾರ ಶೆಟ್ಟಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಶೆಟ್ಟಿಕೊಪ್ಪ ಕ್ಲಸ್ಟರ್ ಮಟ್ಟದ ಕಲಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಭಾ ಕಾರಂಜಿ: ಇತ್ತೀಚೆಗೆ ಮಕ್ಕಳು ಮೊಬೈಲ್, ಟಿ.ವಿ. ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದಾರೆ. ಪೋಷಕರು, ಶಿಕ್ಷಕರು ಈ ಬಗ್ಗೆ ಗಮನ ಹರಿಸಿ ಮಕ್ಕಳಿಗೆ ತಿಳುವಳಿಕೆ ನೀಡಬೇಕಾಗಿದೆ. ಮಕ್ಕಳ ಭವಿಷ್ಯ ಕೇವಲ ನಾಲ್ಕು ಗೋಡೆಗಳ ಮಧ್ಯೆ ಇದ್ದರೆ ಸಾಲದು ಎಂದು ಸರ್ಕಾರವು ಪ್ರತಿಭಾ ಕಾರಂಜಿ, ಕಲಿಕೋತ್ಸವ, ಕ್ರೀಡಾ ಕೂಟ ಹಮ್ಮಿಕೊಳ್ಳುತ್ತಿದೆ ಎಂದರು.
ತಾಲೂಕು ದೈಹಿಕ ಪರಿವೀಕ್ಷಕ ಕೆ.ಮೌನೇಶ್ವರಾಚಾರ್ ಮಾತನಾಡಿ, ಗುಣಾತ್ಮಕ ಶಿಕ್ಷಣ ನೀಡುವ ದೃಷ್ಟಿಯಿಂದ ಕಲಿಕೆಗೆ ಹೆಚ್ಚು ಒತ್ತು ನೀಡಲು ಕಲಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಲಿಕೋತ್ಸವ ಕಾರ್ಯಕ್ರಮವು ಸರ್ಕಾರಿ ಶಾಲೆಗಳಲ್ಲಿ ಮಾತ್ರ ನಡೆಯಲಿದೆ. ಮಗುವಿನ ಸಾಮಾಥ್ಯ ಹೆಚ್ಚಿಸಲು ಹಾಗೂ ಮಗುವಿನ ಸರ್ವೋತೋಮುಖ ಅಭಿವೃದ್ದಿಗೆ ಕಲಿಕೋತ್ಸವ ಸಹಾಯವಾಗುತ್ತದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಶೆಟ್ಟಿಕೊಪ್ಪ ಶಾಲೆಯ ಎಸ್.ಡಿ.ಎಂ.ಸಿ. ಅದ್ಯಕ್ಷ ಉದಯಶೆಟ್ಟಿ ವಹಿಸಿದ್ದರು. ಅತಿಥಿಗಳಾಗಿ ಕಡಹಿನಬೈಲು ಗ್ರಾಮ ಪಂಚಾಯ್ತಿ ಅಧ್ಯಕ್ಷ ಚಂದ್ರಶೇಕರ್, ಗ್ರಾಮ ಪಂಚಾಯ್ತಿ ಸದಸ್ಯರಾದ ಎ.ಎಲ್.ಮಹೇಶ್, ಎಂ.ಟಿ.ಶ್ರೀನಿವಾಸ್, ಮೇರಿ, ಅನಿತ,ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಎನ್.ಎಂ.ಕಾಂತರಾಜ್, ಶಾಲಾ ಮುಖ್ಯೋಪಾಧ್ಯಾಯನಿ ಪುಟ್ಟಮ್ಮ, ಎಸ್.ಡಿ.ಎಂ.ಸಿ.ಸದಸ್ಯರು ಉಪಸ್ಥಿತರಿದ್ದರು.
ಪುಟ್ಟಮ್ಮ ಸ್ವಾಗತಿಸಿದರು. ಸಿ.ತಿಮ್ಮೇಶ್ ನಿರೂಪಿಸಿದರು. ಮಧುಕರ ವರ್ದನ ವಂದಿಸಿದರು.