ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿದ್ಯೆ ಜತೆ ಮೌಲ್ಯ ಕಲಿಸಿ

Lingaraj Badiger
Updated On : 23 Dec 2013, 12:08 pm

ಮೂಡಿಗೆರೆ: ಶಿಕ್ಷಕರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಮೌಲ್ಯ ಕಲಿಸಿದಾಗ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ದೇಶದ ಪ್ರಗತಿ ಕಾಣಬಹುದು ಎಂದು ಕರವೇ ಘಟಕದ ಗೌರವಾಧ್ಯಕ್ಷ ಹೊರಟ್ಟಿ ರಘು ತಿಳಿಸಿದರು.
ತಾಲೂಕಿನ ಜಕ್ಲಿ ಪ್ರಾಥಮಿಕ ಪ್ರೌಢಶಾಲೆಯ ಆವರಣದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಲಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ಆಂಗ್ಲ ಭಾಷೆ ವ್ಯಾಮೋಹದಿಂದ ಕನ್ನಡ ಕಣ್ಮರೆಯಾಗುತ್ತಿರುವುದು ದುರಂತವೇ ಸರಿ. ಕನ್ನಡ ಉಳಿಸಿ ಬೆಳೆಸಿದಲ್ಲಿ ಸಮೃದ್ಧ ಕರ್ನಾಟಕ ಕಟ್ಟಲು ಸಾಧ್ಯ. ಇತರೆ ಭಾಷೆ ಇರಲಿ. ಆದರೆ, ಕನ್ನಡಕ್ಕೆ ಪ್ರಥಮ ಆಧ್ಯತೆ ನೀಡಿ ಎಂದರು.
ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಜಾಕೀರ್ ಹುಸೇನ್ ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವಿಎಸ್‌ಎಸ್‌ಎನ್ ನಿರ್ದೇಶಕರಾದ ಕೆ.ಬಿ. ಗೋಪಾಲಗೌಡ, ಜೆ.ಆರ್. ಜಗದೀಶ್, ಜೆ.ಆರ್. ಶಂಕರ್, ವಸಂತ್, ಶಾಲಾ ಮುಖ್ಯ ಶಿಕ್ಷಕಿ ನಾಗರತ್ನ, ಕೆಂಪೇಗೌಡ ಸೇರಿದಂತೆ ಅನೇಕ ಗಣ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement