ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಡಿ. 25
ಶಿಕ್ಷಣಕ್ಕಾಗಿ ಸರ್ಕಾರ ನೀಡುವ ಸವಲತ್ತು ಸದುಪಯೋಗಪಡಿಸಿಕೊಳ್ಳುವಂತೆ ವಿಧಾನಪರಿಷತ್ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ತಾಲೂಕಿನ ಕಳಸಾಪುರದ ವಿನಾಯಕ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಿಸಿ ಮಾತನಾಡಿದರು.
ಸರ್ಕಾರವು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡುತ್ತಿದೆ. ಬಿಸಿಯೂಟ, ಕ್ಷೀರಭಾಗ್ಯ, ಉಚಿತ ಬೈಸಿಕಲ್ನಂತಹ ಮಹತ್ತರ ಯೋಜನೆ ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಸವಲತ್ತು ಸದ್ಬಳಕೆ ಮಾಡಿಕೊಳ್ಳಬೇಕು. ಆ ಮೂಲಕ ದೇಶದ ಉತ್ತಮ ಪ್ರಜೆಯಾಗಿ ಹೊರಹೊಮ್ಮಲು ಯತ್ನಿಸಬೇಕೆಂದು ತಿಳಿಸಿದರು.
ತಾಪಂ ಸದಸ್ಯರಾದ ಸಿದ್ದಗಂಗಮ್ಮ, ಗ್ರಾಪಂ ಸದಸ್ಯೆ ಹೇಮಾವತಿ, ಕೆ.ಎನ್. ಸಿದ್ದಲಿಂಗೇಗೌಡ, ಕೆ.ವಿ. ದತ್ತಾತ್ರೇಯ, ವಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಚಂದ್ರಮೌಳಿ, ಕಾರ್ಯದರ್ಶಿ ಡಿ.ಕೆ. ಚಂದ್ರೇಗೌಡ, ಸದಸ್ಯ ಎ.ಜಿ. ರೇವಣ್ಣ ಇದ್ದರು.
ಶಾಲೆಯ ಮುಖ್ಯ ಶಿಕ್ಷಕ ಗಂಗಾಧರ್ ಸ್ವಾಗತಿಸಿದರು. ಸಹ ಶಿಕ್ಷಕ ಯೋಗರಾಜ್ ನಿರೂಪಿಸಿದರು. ಎಸ್. ತಿಪ್ಪೇಶ್ ವಂದಿಸಿದರು.